ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ತಮ್ಮ ನಿವಾಸದಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ- ಜಗದೀಶ್ ಶೆಟ್ಟರ್ 

ತಮ್ಮ ನಿವಾಸದಲ್ಲಿ ಕಳೆದ ರಾತ್ರಿ ಬಿಜೆಪಿ ಶಾಸಕರು ಆಗಮಿಸಿದ್ದರು. ಆದರೆ ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಕೈಗಾರಿಕಾಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ
Published on

ಬೆಂಗಳೂರು: ತಮ್ಮ ನಿವಾಸದಲ್ಲಿ ಕಳೆದ ರಾತ್ರಿ ಬಿಜೆಪಿ ಶಾಸಕರು ಆಗಮಿಸಿದ್ದರು. ಆದರೆ ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಕೈಗಾರಿಕಾಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ

ಕಳೆದ ರಾತ್ರಿ ತಮ್ಮ ನಿವಾಸದಲ್ಲಿ ಬಿಜೆಪಿ ಶಾಸಕರು ಆಗಮಿಸಿದ್ದರು ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಮುಖ್ಯಮಂತ್ರಿ ಕೆಂಡಾಮಂಡರಾಗಿದ್ದಾರೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ ಜಗದೀಶ್ ಶೆಟ್ಟರ್ ಸಮಜಾಯಿಸಿ ನೀಡಿದ್ದಾರೆ

ಇದಕ್ಕೂಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕೆಲವು ಶಾಸಕರು ಇಲಾಖೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ತಮ್ಮ ನಿವಾಸಕ್ಕೆ ಬಂದಿದ್ದರು. ಮಾಧ್ಯಮಗಳಲ್ಲಿ ಊಹಾಪೋಹದ ಸುದ್ದಿಗಳು ಪ್ರಸಾರವಾಗಿವೆ. ನಾನು ಸಚಿವನಾಗಿದ್ದೇನೆ. ನನ್ನ ಇಲಾಖೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಶಾಸಕರು ಬಂದಿದ್ದಾರೆ. ಈ ಹಿಂದೆಯೂ ಹಲವು ಬಾರಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಭೆ ಮಾಡಿದ್ದೇನೆ. ಇದೀಗ ಈ ರೀತಿ ಗೊಂದಲ ಸೃಷ್ಟಿಸುವ ಕೆಲಸವಾಗುತ್ತಿದೆ ಎಂದು  ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ

ಶಾಸಕರು ಸಚಿವರ ಭೇಟಿ ಸಹಜ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ಮಾಡುತ್ತಾರೆ. ಇದಕ್ಕೆ ಯಾಕೆ ಮಹತ್ವ ನೀಡಲಾಗುತ್ತಿದೆ ಎಂದು ಶೆಟ್ಟರ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಶಾಸಕ ರೇಣುಕಾಚಾರ್ಯ ಮಾತನಾಡಿ, ಮಧ್ಯ ಕರ್ನಾಟಕಕ್ಕೆ ಸಚಿವ ಸ್ಥಾನ ಸಿಗಬೇಕು. ನಾನು ಸಚಿವ ಸ್ಥಾನದ ಆಕಾಂಕ್ಷಿ. ಕೆಲವು ಶಾಸಕರು ಜಗದೀಶ್ ಶೆಟ್ಟರ್ ಜತೆ ನಡೆಸಿರುವುದು ರಹಸ್ಯ ಸಭೆಯಲ್ಲ. ಶೆಟ್ಟರ್ ಮುಖ್ಯಮಂತ್ರಿಯಾಗಿದ್ದವರು, ಅವರೊಂದಿಗೆ ಮಾತುಕತೆ ನಡೆಸಿದರೆ ತಪ್ಪೇನು ? ಎಂದು ಪ್ರಶ್ನಿಸಿದ್ದಾರೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಯಾರೂ ಸಭೆ ನಡೆಸಿಲ್ಲ. ನಾಯಕತ್ವದ ಬಗ್ಗೆ ಯಾರಿಗೂ ಅಪಸ್ವರವಿಲ್ಲ. ನಮ್ಮ ನಾಯಕರ ಮನೆಗೆ ಭೇಟಿ ನೀಡಿರುವುದರಲ್ಲಿ ಯಾವ ತಪ್ಪಿಲ್ಲ. ಪರಿಷತ್ ಚುನಾವಣೆಯಲ್ಲಿ ಕೆಲವು ಶಾಸಕರ ಮತ ಅಸಿಂಧುವಾಗಿರುವುದು ಆಕಸ್ಮಿಕವಾಗಿರಬಹುದು. ಪಕ್ಷಕ್ಕೆ ದ್ರೋಹ ಮಾಡುವ ಕೆಲಸವನ್ನು ನಾವು ಯಾರೂ ಮಾಡುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಮೇಲ್ಮನೆ ಚುನಾವಣೆಯಲ್ಲಿ ಕೆಲವು  ಶಾಸಕರ ಮತ ಅಸಿಂಧುವಾಗಿರುವುದು ಆಕಸ್ಮಿಕವಾಗಿರಬಹುದು. ಪಕ್ಷಕ್ಕೆ ದ್ರೋಹ ಮಾಡುವ  ಕೆಲಸವನ್ನು ನಾವು ಯಾರೂ ಮಾಡುವುದಿಲ್ಲ ಎಂದು ರೇಣುಕಾಚಾರ್ಯ ಹೇಳಿದರು

ನಿನ್ನೆ ನಡೆದ ಸಭೆಯಲ್ಲಿ ಸಚಿವ ಸಂಪುಟದಲ್ಲಿ ಅವಕಾಶ ದೊರೆಯದ ಉಮೇಶ್ ಕತ್ತಿ, ಮುರುಗೇಶ ನಿರಾಣಿ, ರಾಜೂಗೌಡ,  ಎ.ಎಸ್​. ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ್​ ಸೇರಿದಂತೆ ಇನ್ನೂ ಕೆಲವು ಶಾಸಕರು  ಸಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಸಭೆಯಲ್ಲಿ ಬಿ.ವೈ.ವಿಜಯೇಂದ್ರ ಅವರು ಸರ್ಕಾರದ ಕೆಲಸ ಕಾರ್ಯಗಳಲ್ಲಿ ಮೂಗು ತೂರಿಸುತ್ತಿದ್ದಾರೆ ಎಂಬ ಆಕ್ಷೇಪ ಕೇಳಿಬಂದಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com