ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ರಾಜ್ಯಪಾಲರ ಭಾಷಣ ಹಿಡಿದು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ದು ತಂತ್ರ

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ವಿಧಾನಸೌಧದಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಹಿಡಿದು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ದರಾಮಯ್ಯ ಅವರು ತಂತ್ರ ರೂಪಿಸಿದ್ದಾರೆಂದು ತಿಳಿದುಬಂದಿದೆ. 
ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ರಾಜ್ಯಪಾಲರ ಭಾಷಣೆ ಹಿಡಿದು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ದು ತಂತ್ರ
ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ರಾಜ್ಯಪಾಲರ ಭಾಷಣೆ ಹಿಡಿದು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ದು ತಂತ್ರ
Updated on

ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ವಿಧಾನಸೌಧದಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಹಿಡಿದು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ದರಾಮಯ್ಯ ಅವರು ತಂತ್ರ ರೂಪಿಸಿದ್ದಾರೆಂದು ತಿಳಿದುಬಂದಿದೆ. 

ಸಭೆಯಲ್ಲಿ ವಜುಭಾಯಿ ವಾಲಾ ಅವರ ಭಾಷಣವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯಅವರು, ರಾಜ್ಯಪಾಲರ ಭಾಷಣದಲ್ಲಿ ಹೊಸತೇನು ಇರಲಿಲ್ಲ. ಬದಲಾಗಿ ನಮ್ಮ ಸರ್ಕಾರದ ಅವಧಿಯ ಕಾರ್ಯಕ್ರಮಗಳನ್ನು ಹಾಗೂ ಮೈತ್ರಿ ಸರ್ಕಾರದ ಅವಧಿಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಉಲ್ಲೇಖಿಸಲಾಗಿದೆ ಹೊರತು ಯಡಿಯೂರಪ್ಪ ಸರ್ಕಾರದ ಸಾಧನೆಗಳ ಪಟ್ಟಿ ಇರಲಿಲ್ಲ ಎಂದು ಹೇಳಿದ್ದಾರೆ. 

ಇದರಂದೆ ಇಂದು ನಡೆಯಲಿರುವ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಕುರಿತಾಗಿ ಚರ್ಚೆ ನಡೆಯಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧರಾಮಯ್ಯ ಮುಂದಾಗಿದ್ದಾರೆ. ಶಾಸಕಾಂಗ ಸಭೆಯಲ್ಲಿ ಈ ವಿಚಾರವಾಗಿ ಶಾಸಕರ ಜೊತೆಗೆ ಚರ್ಚೆ ನಡಸಿದ್ದ ಸಿದ್ದರಾಮಯ್ಯ ಆಡಳಿತಪಕ್ಷದ ವಿರುದ್ಧ ಸದನದೊಳಗೆ ಹೋರಾಟ ನಡೆಸಲು ತಂತ್ರ ರೂಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com