ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕರ ವಿರುದ್ಧ ಕಠಿಣ ಕ್ರಮಕ್ಕೆ ಕಟೀಲ್ ಒತ್ತಾಯ

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಒತ್ತಾಯಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Updated on

ಮೈಸೂರು: ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳಾಗಿರುವ ಈ ಯುವಕರು ದೇಶ ವಿರೋಧಿ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಅವರನ್ನು ಬಂಧಿಸುವ ಅಥವಾ ಬಿಡುಗಡೆ ಮಾಡುವುದು ಗೃಹ ಇಲಾಖೆಗೆ ಸೇರಿದೆ ಎಂದು ಹೇಳಿದರು.

ಈ ಯುವಕರ ಮೇಲಿನ ಹಿಂದೂ ಕಾರ್ಯಕರ್ತರ ದಾಳಿಯನ್ನು ಸಮರ್ಥಿಸಿಕೊಂಡರು. ಇದು ರಾಷ್ಟ್ರ ವಿರೋಧಿ ಚಟುವಟಿಕೆಗಳ ವಿರುದ್ಧದ ಅಶಾಂತಿಯ ಕೃತ್ಯವೆಂದರು. 

ಇದೇ ವೇಳೆ ಬಳ್ಳಾರಿಯಲ್ಲಿ ಸಚಿವ ಅಶೋಕ್ ಅವರ ಪುತ್ರನ ಕಾರು ಅಪಘಾತ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿದ ಕಟೀಲ್, ಸಚಿವರ ಪುತ್ರ ಎಂಬುದನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೋಡಿಕೊಳ್ಳುತ್ತಾರೆ ಎಂದರು. 

ಮತ್ತೊಂದು ಸುತ್ತಿನ ಆಪರೇಷನ್ ಕಮಲದ ಸುಳಿವನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. ಆದಾಗ್ಯೂ, ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಪಕ್ಷ ಕಾಯುತ್ತಿರುವುದಾಗಿ ತಿಳಿಸಿದರು. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಟೀಲ್, ಬಿಜೆಪಿ ಬಾಗಿಲು ಎಲ್ಲರಿಗೂ ತೆರೆದಿರುತ್ತದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com