ರಾಜ್ಯದ ಜನತೆಗೆ ಅತ್ಯುತ್ತಮ ಆಡಳಿತ ನೀಡಲು ಇನ್ನು 6 ತಿಂಗಳು ಸಮಯ ಕೊಡಿ: ಬಿ ಎಸ್ ಯಡಿಯೂರಪ್ಪ 

ವಿರೋಧ ಪಕ್ಷಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವತ್ತ ಗಮನ ಹರಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿಯನ್ನು ಬೆಂಗಳೂರಿನಲ್ಲಿ ಬರಮಾಡಿಕೊಂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿಯನ್ನು ಬೆಂಗಳೂರಿನಲ್ಲಿ ಬರಮಾಡಿಕೊಂಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
Updated on

ಮೈಸೂರು: ವಿರೋಧ ಪಕ್ಷಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವತ್ತ ಗಮನ ಹರಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.


ಬಿಜೆಪಿ ಸರ್ಕಾರ ಏನು ಮಾಡಲಿದೆ ಎಂಬುದನ್ನು ರಾಜ್ಯದ ಜನತೆ ಸ್ವಲ್ಪ ಸಮಯ ತಾಳ್ಮೆಯಿಂದ ಕಾದು ನೋಡಬೇಕು. ಮುಂದಿನ ಆರು ತಿಂಗಳಲ್ಲಿ ಅವರು ಬದಲಾವಣೆಯನ್ನು ಖಂಡಿತಾ ಗುರುತಿಸುತ್ತಾರೆ, ಹಿಂದಿನ ಸಿದ್ದರಾಮಯ್ಯ ಸರ್ಕಾರ ಮಾಡಿರುವ ತಪ್ಪುಗಳನ್ನು ಸಹ ಬಹಿರಂಗಪಡಿಸುತ್ತೇವೆ ಎಂದರು.


ಮುಖ್ಯಮಂತ್ರಿಯಾಗಿ ನಾನು ಏಳು ತಿಂಗಳಾಗಿದೆಯಷ್ಟೆ. ಸಿದ್ದರಾಮಯ್ಯನವರು 5 ವರ್ಷಗಳ ಕಾಲ ಮತ್ತು ಹೆಚ್ ಡಿ ಕುಮಾರಸ್ವಾಮಿ 14 ತಿಂಗಳುಗಳ ಕಾಲ ಸಿಎಂ ಆಗಿ ಆಡಳಿತ ನಡೆಸಿದ್ದರು. ನನ್ನನ್ನು ಟೀಕಿಸುವ ಬದಲು ಅವರು ಹಿಂತಿರುಗಿ ನೋಡಿ ತಮ್ಮ ಕೆಲಸದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.


ಇದುವರೆಗೆ ಹಾಗೆಯೇ ಉಳಿದುಕೊಂಡಿದ್ದ ನೀರಾವರಿ ಯೋಜನೆಗಳಿಗೆ ನನ್ನ ನೇತೃತ್ವದ ಸರ್ಕಾರ ಮಹತ್ವ ನೀಡಲಿದೆ. ದೀರ್ಘ ಕಾಲದಿಂದ ಉಳಿದಿರುವ ಯೋಜನೆಗಳಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಈಗಾಗಲೇ ಬಜೆಟ್ ಪೂರ್ವ ಚರ್ಚೆಗಳನ್ನು ನಡೆಸಿದ್ದು ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಆದ್ಯತೆ ಕೊಡಲಾಗುವುದು. ಜನರ ನಿರೀಕ್ಷೆಗಳನ್ನು ಈಡೇರಿಸಲು ನನಗೆ ಇನ್ನೂ 6 ತಿಂಗಳು ಸಮಯ ಬೇಕು ಎಂದರು.


ರಾಜ್ಯದ ಪ್ರಗತಿಗೆ ತಮ್ಮ ಸಂಪುಟ ಸಹೋದ್ಯೋಗಿಗಳು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 5ರಂದು ಮಂಡಿಸುವ ಬಜೆಟ್ ನಲ್ಲಿ ರೈತಪರ ಯೋಜನೆಗಳು ಮಾತ್ರವಲ್ಲದೆ ಕೃಷಿ ಮತ್ತು ನೀರಾವರಿ ಯೋಜನೆಗಳನ್ನು ಸೇರಿಸಲಾಗುವುದು. ಕಳಸಾ-ಬಂಡೂರಿ ಯೋಜನೆಗಳಿಗೆ ಕೆಲಸ ಆರಂಭಿಸಲಾಗುವುದು ಎಂದರು.


ಬರಗಾಲ ಮತ್ತು ಪ್ರವಾಹ ಪೀಡಿತರ ಪುನರ್ವಸತಿಗೆ ನಮ್ಮ ಕೈಲಾದ ಪ್ರಯತ್ನ ಮಾಡಿದ್ದೇವೆ. ಕೇಂದ್ರದಿಂದ ಅನುದಾನವನ್ನು ಸಹ ನಿರೀಕ್ಷಿಸುತ್ತಿದ್ದೇವೆ. ಸಂಪನ್ಮೂಲಗಳ ಕ್ರೋಢೀಕರಣಕ್ಕೆ ಸಹ ನೋಡಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com