ಸೋಮಣ್ಣ
ರಾಜಕೀಯ
ವಿಜಯೇಂದ್ರ ಸೂಪರ್ ಸಿಎಂ ಅಲ್ಲ: ಯಡಿಯೂರಪ್ಪ ಪ್ರಶ್ನಾತೀತ ನಾಯಕ; ಸೋಮಣ್ಣ
ನನ್ನ ರಾಜಕೀಯ ಜೀವನದಲ್ಲಿ ಏಳು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ಅವರಿರುವಾಗ ಯಾರೂ ಸೂಪರ್ ಸಿಎಂ ಇಲ್ಲ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.
ಬಳ್ಳಾರಿ: ನನ್ನ ರಾಜಕೀಯ ಜೀವನದಲ್ಲಿ ಏಳು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ಅವರಿರುವಾಗ ಯಾರೂ ಸೂಪರ್ ಸಿಎಂ ಇಲ್ಲ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.
ಯಡಿಯೂರಪ್ಪ ಪ್ರಶ್ನಾತಿತ ನಾಯಕ. ಅವರ ಮಗ ವಿಜಯೇಂದ್ರ ಸೂಪರ್ ಸಿಎಂ ಅಲ್ಲ. ಸಿಎಂಗೆ 78 ಆಗಿರಬಹುದು. ಹಾಗೆಂದು ವಿಜಯೇಂದ್ರ ಉತ್ತರಾಧಿಕಾರಿ ಅಲ್ಲ.
ನಲ್ವತ್ತೆರಡು ವರ್ಷ, ಏಳು ಜನ ಸಿಎಂಗಳ ಜೊತೆ ಕೆಲಸ ಮಾಡಿದ್ದೇನೆ. ಒಬ್ಬರನ್ನು ಮುಖ್ಯಮಂತ್ರಿ ಮಾಡಲು ಏನು ಮಾಡಲಾಗಿದೆ ಎಲ್ಲವೂ ಗೊತ್ತು, ಎಲ್ಲ ಅನುಭವವೂ ಇದೆ’ ಎಂದರು. ಸರ್ಕಾರದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ. ಉತ್ತರಾಧಿಕಾರಿಯೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ