'ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ತಾವೇ ಸಿಡಿಸಿಕೊಂಡಿದ್ದಾರೆ ಯತ್ನಾಳ್'

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್. ದೊರೆಸ್ವಾಮಿ ಅವರನ್ನು ನಿಂದಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಹರಿಹಾಯ್ದಿದ್ದಾರೆ.
ಬಸನಗೌಡ ಯತ್ನಾಳ್
ಬಸನಗೌಡ ಯತ್ನಾಳ್
Updated on: 

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್. ದೊರೆಸ್ವಾಮಿ ಅವರನ್ನು ನಿಂದಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಹರಿಹಾಯ್ದಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧೀಜಿಯ ಒಡನಾಡಿಯಾಗಿದ್ದ ಎಚ್.ಎಸ್. ದೊರೆಸ್ವಾಮಿಯವರಿಗೆ ಅವಹೇಳನಕಾರಿ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಖಂಡನೀಯವಾಗಿದೆ.

ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೊರೆಸ್ವಾಮಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿರುವ ಯತ್ನಾಳ್ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿರುವುದು ಎಂತಹ ಚೋದ್ಯ ಎಂದಿದ್ದಾರೆ.

ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ದೊರೆಸ್ವಾಮಿ ಒಬ್ಬರೇ ಮಾಡಿಲ್ಲ. ಪಾಕಿಸ್ತಾನ್ ಪರ ಘೋಷಣೆ ಕೂಗುವವರನ್ನು ಸಮರ್ಥಿಸಿಕೊಳ್ಳುವುದನ್ನು ನೋಡಿದರೆ ಅವರು ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಯತ್ನಾಳ್ ಹೇಳಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com