ಕರ್ನಾಟಕದಲ್ಲಿ ಹಿಟ್ಲರ್ ಆಡಳಿತಕ್ಕೆ ಅವಕಾಶ ಕೊಡಲ್ಲ: ವಿದ್ಯಾರ್ಥಿಗಳ ಮೇಲಿನ ದಾಳಿಗೆ ಸಿದ್ದರಾಮಯ್ಯ ಕಿಡಿ

ಶಿಕ್ಷಣ ಸಂಸ್ಥೆಗಳು ಜ್ಞಾನದ ಪ್ರಸಾರ ಕೇಂದ್ರಗಳು, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೂಲವಾಗಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಜ್ಞಾನದ ಪ್ರಸಾರ ಕೇಂದ್ರಗಳು, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೂಲವಾಗಿದೆ. 

ಬಿಜೆಪಿಯ ಸಿದ್ಧಾಂತವು ಫ್ಯಾಸಿಸಂನ ದುರ್ಬಲ ಅಡಿಪಾಯದಲ್ಲಿದೆ. ನಮ್ಮ ವಿಶ್ವವಿದ್ಯಾಲಯಗಳ ಜ್ಞಾನದ ನೆಲೆಯಿಂದ ಬಿಜೆಪಿಗೆ ಬೆದರಿಕೆ ಇದೆ. ಆದ್ದರಿಂದ ಅವುಗಳನ್ನು ಮಟ್ಟಹಾಕಲು ಮತ್ತು ದುರ್ಬಲಗೊಳಿಸಲು ಅವರು ಬಯಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಿಜೆಪಿಯ ಗೂಂಡಾಗಳು ಬೆಂಗಳೂರಿನ ಜ್ಯೋತಿನಿವಾಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಎಎಗೆ ಬೆಂಬಲ ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಯಡಿಯೂರಪ್ಪ ಅವರೇ, ನಿಮ್ಮ ಪಕ್ಷದ ಗೂಂಡಾಗಿರಿಗಳನ್ನು ನಿಯಂತ್ರಿಸಲು ನಾನು ನಿಮಗೆ ಒತ್ತಾಯಿಸುತ್ತಿದ್ದೇನೆ. ನಿಮ್ಮ ಸ್ವಾರ್ಥ ಉದ್ದೇಶಗಳಿಗಾಗಿ ಜ್ಞಾನ ಮತ್ತು ಶಿಕ್ಷಣ ಸಂಸ್ಥೆಗಳನ್ನು ಮಟ್ಟಹಾಕಬೇಡಿ. ಕರ್ನಾಟಕದಲ್ಲಿ ನಿಮ್ಮ ಹಿಟ್ಲರ್ ಆಡಳಿತಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com