ಚಕ್ರವರ್ತಿ ಸೂಲಿಬೆಲೆ, ತೇಜಸ್ವಿ ಸೂರ್ಯ ಮಹಾನ್ ದೇಶಭಕ್ತರೇನೂ ಅಲ್ಲ: ಎಚ್ ಡಿ ಕುಮಾರಸ್ವಾಮಿ

ಕಿಡಿಗೇಡಿಗಳ ಕೃತ್ಯಕ್ಕೆ ಧರ್ಮದ ಹೆಸರು ಬಳಿಯಬಾರದು ಎಂದು ಜೆಡಿಎಸ್ ಶಾಸಕಾಂಗ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆ-ತೇಜಸ್ವಿ ಸೂರ್ಯ-ಎಚ್ಡಿಕೆ
ಚಕ್ರವರ್ತಿ ಸೂಲಿಬೆಲೆ-ತೇಜಸ್ವಿ ಸೂರ್ಯ-ಎಚ್ಡಿಕೆ
Updated on

ಬೆಂಗಳೂರು: ಕಿಡಿಗೇಡಿಗಳ ಕೃತ್ಯಕ್ಕೆ ಧರ್ಮದ ಹೆಸರು ಬಳಿಯಬಾರದು ಎಂದು ಜೆಡಿಎಸ್ ಶಾಸಕಾಂಗ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸ್‌ಡಿಪಿಐ  ಕಾರ್ಯಕರ್ತರ ಬಂಧನ ಹಾಗೂ ಸರ್ಕಾರದಿಂದ ಎಫ್‌ಡಿಪಿಐ ನಿಷೇಧ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರೋ ಮಾಡಿದ ಕೃತ್ಯವನ್ನು ಒಂದು ಸಮುದಾಯದ ಮೇಲೆ ಹೇರಬಾರದು. ಸತ್ಯಾಸತ್ಯತೆ ಅರಿತು ಕ್ರಮ ತೆಗೆದುಕೊಳ್ಳಬೇಕು ಎಂದರು‌.

ಯುವ ಬ್ರಿಗೇಡ್‌ ಚಕ್ರವರ್ತಿ ಸೂಲಿಬೆಲೆ, ಸಂಸದ ತೇಜಸ್ವಿ ಸೂರ್ಯ ಇವರು ಮಹಾನ್ ದೇಶಭಕ್ತರೇನೂ ಅಲ್ಲ. ಯುಗಪುರುಷರೂ ಅಲ್ಲ. ಇವರೇನು ಹುತಾತ್ಮರಾಗಲೂ ಹೋಗಿಯೂ ಇಲ್ಲ. ತೇಜಸ್ವಿ ಸೂರ್ಯ ಬೆಂಗಳೂರಿಗೆ ನೀಡಿದ ಕೊಡುಗೆಯಾದರು ಏನು? ಇವರೇನು ಸಾಧನೆ ಮಾಡಿದ್ದಾರೆ ಎಂದು ಇವರ ಕೊಲೆಗೆ ಯತ್ನಿಸುತ್ತಾರೆ. ಯಾರೋ ತಪ್ಪು ಮಾಡಿದ ಮಾತ್ರಕ್ಕೆ ಒಂದು ಸಮುದಾಯದ ಮೇಲೆ ತಪ್ಪು  ಹೊರಿಸಬಾರದು. ತನಿಖೆ ಮಾಡಿ ಸತ್ಯ ಇದ್ದರೆ ಯಾವುದೇ ಸಂಘಟನೆ ಕ್ರಮ ತೆಗೆದುಕೊಳ್ಳಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com