ರೇಣುಕಾಚಾರ್ಯ ಒಬ್ಬ ಮಾನಸಿಕ ಅಸ್ವಸ್ಥ: ಜಮೀರ್ ಅಹ್ಮದ್ ಖಾನ್

ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಾರೆ ಎಂದು  ವಿವಾದಾತ್ಮಕ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ....
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್
Updated on

ಬೆಂಗಳೂರು: ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಾರೆ ಎಂದು  ವಿವಾದಾತ್ಮಕ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಮುಸ್ಲಿಂ ಮುಖಂಡ ಹಾಗೂ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿರುವ ರೇಣುಕಾಚಾರ್ಯ ಒಬ್ಬ ಮಾನಸಿಕ ಅಸ್ವಸ್ಥ ಎಂದು ಟೀಕಿಸಿದ್ದಾರೆ.

ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುವ ರೇಣುಕಾಚಾರ್ಯ‌ನನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿಕೊಂಡಿರುವ ಉದ್ದೇಶವಾದರು ಏನು? ಎಂದು ಪ್ರಶ್ನಿಸಿರುವ ಜಮೀರ್, ಸಚಿವ ಸಂಪುಟದಲ್ಲಿ ಸ್ಥಾನ ಸಿಗದ‌ ಕಾರಣ ರೇಣುಕಾಚಾರ್ಯರ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದಕ್ಕೆ ತಮ್ಮ ಮರುಕವಿದೆ ಎಂದು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com