ಸಿಎಂ ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆ: ಜಾರಕಿಹೊಳಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಶುಭಾಶಯಗಳನ್ನು ತಿಳಿಸಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಯವರು, ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆಂದು ಹೇಳಿದ್ದಾರೆ. 
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಶುಭಾಶಯಗಳನ್ನು ತಿಳಿಸಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಯವರು, ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆಂದು ಹೇಳಿದ್ದಾರೆ. 


ಸಂದಿಗ್ಧ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಅವರು ರಾಜ್ಯದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದರು. ರಾಜ್ಯಕ್ಕೆ ಎದುರಾದ ಸರಣಿ ಸಮಸ್ಯೆಗಳನ್ನು ಹಾಗೂ ಪ್ರವಾಹದಂತಹ ಸವಾಲು, ಕೊರೋನಾ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉತ್ತಮ ಆಡಳಿತ ನೀಡುತ್ತಿದ್ದು, ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿಯೇ 2023ರ ಚುನಾವಣೆಯನ್ನೂ ಎದುರಿಸುತ್ತೇವೆಂದು ಹೇಳಿದ್ದಾರೆ. 

ಇದೇ ವೇಳೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ದೆಹಲಿಗೆ ಭೇಟಿ ನೀಡಿರುವ ಕುರಿತು ಮಾತನಾಡಿದ ಅವರು, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಸಂಪುಟ ಪುನಾರಚನೆ ಕುರಿತು ನನಗೆ ಮಾಹಿತಿ ಇಲ್ಲ. ಲಕ್ಷ್ಮಣ್ ಸವದಿಯವರೊಂದಿಗೆ ದೆಹಲಿಯೂ ಹೋಗಿಲ್ಲ. ಏನೇ ಆದರೂ ಮುಖ್ಯಮಂತ್ರಿಗಳೂ ಮಾತ್ರ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ. ನಮ್ಮ ಪಕ್ಷ ಯಡಿಯೂರಪ್ಪನನ್ನು ಪದಚ್ಯುತಗೊಳಿಸುವುದಿಲ್ಲ. ಇದು ಮಾಧ್ಯಮಗಳ ಊಹಾಪೋಹಗಳಷ್ಟೇ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಸಾರಿಗೆ ಇಲಾಖೆಯ ಕಾರ್ಯಗಳ ಕುರಿತು ಚರ್ಚೆ ನಡೆಸಲು ಸವದಿಯವರು ದೆಹಲಿಗೆ ತೆರಳಿದ್ದಾರೆ. ಇದರಲ್ಲಿ ವಿಶೇಷವೇನೂ ಇಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com