ನಾಲಿಗೆ ಮೇಲೆ ನಿಂತ ನಾಯಕ ಎಂದರೆ ಅದು ಯಡಿಯೂರಪ್ಪ ಮಾತ್ರ: ಎಚ್.ವಿಶ್ವನಾಥ್

ನಾಲಿಗೆ ಮೇಲೆ ನಿಂತ ನಾಯಕ ಅಂದರೆ ಅದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಾತ್ರ. ಮಾತಿಗೆ ತಪ್ಪದ ನಾಯಕ ಯಡಿಯೂರಪ್ಪ. ನಾವೆಲ್ಲ ಅವರ ಬೆಂಬಲಕ್ಕೆ ಇದ್ದೇವೆ ಎಂದು ನೂತನ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಹಾಡಿ ಹೊಗಳಿದ್ದಾರೆ.
ಎಚ್ ವಿಶ್ವನಾಥ್ (ಸಂಗ್ರಹ ಚಿತ್ರ)
ಎಚ್ ವಿಶ್ವನಾಥ್ (ಸಂಗ್ರಹ ಚಿತ್ರ)
Updated on: 

ಬೆಂಗಳೂರು: ನಾಲಿಗೆ ಮೇಲೆ ನಿಂತ ನಾಯಕ ಅಂದರೆ ಅದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಾತ್ರ. ಮಾತಿಗೆ ತಪ್ಪದ ನಾಯಕ ಯಡಿಯೂರಪ್ಪ. ನಾವೆಲ್ಲ ಅವರ ಬೆಂಬಲಕ್ಕೆ ಇದ್ದೇವೆ ಎಂದು ನೂತನ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಹಾಡಿ ಹೊಗಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿ ನಂತರ ಮಾತನಾಡಿದ ಅವರು, ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ.ನಡ್ಡಾ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದರು.

ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಕೊರೋನಾ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡುತ್ತೇವೆ ಎಂದರು.

ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾ ರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು. ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com