ಕುಮಾರಸ್ವಾಮಿ-ಯಡಿಯೂರಪ್ಪ
ಕುಮಾರಸ್ವಾಮಿ-ಯಡಿಯೂರಪ್ಪ

ಬಿಜೆಪಿ ಸರ್ಕಾರಕ್ಕೆ ಎಚ್.ಡಿ ಕುಮಾರಸ್ವಾಮಿ ಬೆಂಬಲ: ಸಿಪಿ ಯೋಗೀಶ್ವರ್ ಸ್ಫೋಟಕ ಹೇಳಿಕೆ

ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
   
ವಿಧಾನ ಸೌಧದಲ್ಲಿಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿ ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ಅಧಿಕಾರಿಗಳನ್ನೇ ಜಿಲ್ಲೆಗೆ ವರ್ಗಾವಣೆ ಮಾಡಿಕೊಟ್ಟಿದ್ದಾರೆ. ಅವರು ಸೂಚಿಸಿದ ಯೋಜನೆಗಳು, ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಹಾಗೂ ಮುಖ್ಯಮಂತ್ರಿಗಳ ವಿರುದ್ಧವೂ ಯೋಗೀಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
    
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಅನುಕೂಲ  ರಾಜಕಾರಣಿಗಳು.ಇಷ್ಟು ದಿನ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದಿದ್ದರು.ಈಗ ಇಬ್ಬರಿಗೂ ಅಸ್ತಿತ್ವದ ಪ್ರಶ್ನೆಯಾಗಿದೆ.ಹೀಗಾಗಿ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ.ಕುಮಾರಸ್ವಾಮಿ ಅವರಿಗೆ ಈಗ ಅಸ್ತಿತ್ವದ ಪ್ರಶ್ನೆಯಾಗಿರುವುದರಿಂದ ಮಾತನಾಡುತ್ತಿದ್ದಾರೆ.ಅವರ ಮಾತುಗಳನ್ನು ಮೇಲ್ನೋಟಕ್ಕೆ ನೋಡಿದರೆ ಬಿಜೆಪಿಗೆ ಬೆಂಬಲ ಕೊಡುತ್ತಿದ್ದಾರೆ ಎಂಬಂತೆ  ಕಾಣಿಸುತ್ತಿದೆ.ನಮ್ಮ ಸರ್ಕಾರದಲ್ಲಿ ಕುಮಾರಸ್ವಾಮಿ ಹೇಳಿರುವ ಎಲ್ಲ.ಕೆಲಸಗಳು ನಡೆಯುತ್ತಿವೆ.ಅವರು ಸೂಚಿಸಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಕೊಡಲಾಗುತ್ತಿದೆ.ಹೀಗಾಗಿ ಅವರೂ ಬಿಜೆಪಿಗೆ ಸಫೋರ್ಟ್ ಮಾಡಲು ಮುಂದಾಗಿದ್ದಾರೆ ಎಂದು ಜಿಲ್ಲೆಯ ಇಬ್ಬರೂ ಪ್ರಮುಖ ನಾಯಕರ ವಿರುದ್ಧ ಕಿಡಿಕಾರಿದರು. 
  
ಡಿ.ಕೆ.ಶಿವಕುಮಾರ್ ಹಗಲು ಹೊತ್ತಲ್ಲಿ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಾರೆ.ರಾತ್ರಿಯಾದರೆ ನಮ್ಮ ಮುಖ್ಯಮಂತ್ರಿ ಬಳಿ ಬಂದು ಕೆಲಸ ಮಾಡಿಸಿ ಕೊಳ್ಳುತ್ತಾರೆ.ಇಬ್ಬರೂ ಸಹ  ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲು ಎಂದು ಬಯಸುತ್ತಾರೆ.ಇಬ್ಬರೂ ನಾಯಕರು ಸಂದರ್ಭಕ್ಕೆ ತಕ್ಕಂತೆ,ಹೊಂದಾಣಿಕೆ ಮಾಡಿಕೊಳ್ಳುತ್ತಾರೆ.ಅವರನ್ನು ನಂಬಿದ ಎರಡೂ ಪಕ್ಷಗಳ  ಕಾರ್ಯಕರ್ತರು ಹಾಳಾಗುತ್ತಿದ್ದಾರೆ.ಅದಕ್ಕೆ ಬಿಜೆಪಿ ಪಕ್ಷಕ್ಕೆ ಸೇರುವಂತೆ ಬಹಿರಂಗವಾಗಿ ಕಾರ್ಯಕರ್ತರಿಗೆ ಆಹ್ವಾನ ನೀಡುತ್ತಿದ್ದೇನೆ ಎಂದು ಹೇಳಿದರು.   

ವಿಧಾನ ಪರಿಷತ್ ಗೆ ತಮ್ಮನ್ನು ಆಯ್ಕೆ ಮಾಡುವುದರಲ್ಲಿ ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಪಕ್ಷ ಹಾಗೂ ಯಡಿಯೂರಪ್ಪ ಎಲ್ಲರೂ ಒಮ್ಮತದಿಂದ ನನ್ನನ್ನು ಆಯ್ಕೆ ಮಾಡಿದ್ದಾರೆ.ನನ್ನನ್ನು ಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿರುವುದು ಪುಣ್ಯ,ಸಂಪುಟ ಕ್ಕೆ ಸೇರಿಸಿಕೊಳ್ಳುವುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಎಂದು ಮಾರ್ಮಿಕವಾಗಿ ನುಡಿದರು.

Related Stories

No stories found.

Advertisement

X
Kannada Prabha
www.kannadaprabha.com