ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ವಲಸೆ ಕಾರ್ಮಿಕರ ಸಮಸ್ಯೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಲಾಕ್‌ಡೌನ್ ಮತ್ತು ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿವೇಚನಾರಹಿತ ಕ್ರಮದಿಂದ ದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಶ್ರಮಿಕರ ಬದುಕನ್ನು ಕೇಂದ್ರ ಸರಕಾರ ಅಸಹನೀಯಗೊಳಿಸಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಲಾಕ್‌ಡೌನ್ ಮತ್ತು ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿವೇಚನಾರಹಿತ ಕ್ರಮದಿಂದ ದೇಶದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಶ್ರಮಿಕರ ಬದುಕನ್ನು ಕೇಂದ್ರ ಸರಕಾರ ಅಸಹನೀಯಗೊಳಿಸಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನವರಿ 30ರಂದೇ ಕೋವಿಡ್‌ ಗಮನಕ್ಕೆ ಬಂದಿತ್ತು. ಆದರೂ ಪ್ರಧಾನಿ ಮೋದಿಯವರು ಅಮೆರಿಕಾದ ಟ್ರಂಪ್‌ ಕರೆಸಿ ಸನ್ಮಾನ ಮಾಡಿ ಶೋ ಮಾಡಿದರು. ಕೇಂದ್ರ ಆಗಲೇ ಹೆಚ್ಚೆತ್ತುಕೊಂಡಿದ್ದರೆ ಇಷ್ಟೆಲ್ಲಾ ಆಗ್ತಿರಲಿಲ್ಲ ಎಂದು ಪ್ರಧಾನಿಯನ್ನು ಖರ್ಗೆ ಕುಟುಕಿದರು.

ಇನ್ನೂ ವಲಸೆ ಕಾರ್ಮಿಕರ ಸಮಸ್ಯೆಯನ್ನು ನಿರ್ವಹಿಸಲು ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿತ್ತು, ಆದರೆ ಕಾರ್ಯಕ್ರಮ ಮಾಡಲು ಅನುಮತಿ ನಿರಾಕರಿಸಿರುವುದರ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com