ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಸಿಎಂ ಗ್ರೀನ್ ಸಿಗ್ನಲ್

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಯಾವಾಗ ಬೇಕಾದರೂ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿ. ಆದರೆ ಹೆಚ್ಚು ಜನ ಸೇರಿಸುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಮೂಲಕ ಪದಗ್ರಹಣ ಸಮಾರಂಭಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಯಾವಾಗ ಬೇಕಾದರೂ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿ. ಆದರೆ ಹೆಚ್ಚು ಜನ ಸೇರಿಸುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಮೂಲಕ ಪದಗ್ರಹಣ ಸಮಾರಂಭಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ನಿನ್ನೆಯೇ ದೂರವಾಣಿ ಕರೆ ಮಾಡಿ ಮಾತಾಡಿದ್ದೇನೆ. ಶಿವಕುಮಾರ್ ಕೂಡ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾರ್ಯಕ್ರಮ ಮಾಡಿಕೊಳ್ಳಲಿ. ನಮ್ಮದೇನೂ ಅಭ್ಯಂತರ ಇಲ್ಲ ಎಂದರು. 

ಈ ಮೂಲಕ ಕೊನೆಗೂ ರಾಜ್ಯ ಸರ್ಕಾರದಿಂದ ಡಿ.ಕೆ. ಶಿವಕುಮಾರ್ ಅಧಿಕಾರ ಪದಗ್ರಹಣ ಸಮಾರಂಭಕ್ಕೆ ಹಸಿರು ನಿಶಾನೆ ದೊರಕ್ಕಿದ್ದು, ಕಾಂಗ್ರೆಸ್ ಪಕ್ಷ ಮುಂದಿನ ಸಿದ್ಧತೆಗಳನ್ನು ಆರಂಭಿಸಲು ಅವಕಾಶ ದೊರೆತಿದೆ. 

ಈಗಾಗಲೇ ಸೂಕ್ತ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಂಡು ಕಾರ್ಯಕ್ರಮ ನಡೆಸುವುದಾಗಿ ಡಿ.ಕೆ. ಶಿವಕುಮಾರ್ ಭರವಸೆ ಕೊಟ್ಟಿದ್ದು, ಈ ಹಿಂದೆ ನಿಗದಿಪಡಿಸಿದಂತೆ ಜೂನ್ 14ರಂದೇ ಪದಗ್ರಹಣ ಸಮಾರಂಭ ನೆರವೇರುವುದು ಖಚಿತವಾಗಿದೆ.

ಬೆಂಗಳೂರಿನ ಕ್ಲೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತ ಪದಗ್ರಹಣ ಸಮಾರಂಭ 150 ಜನ ಮುಖಂಡರ ಸಮ್ಮುಖದಲ್ಲಿ ನೆರವೇರಲಿದೆ. ರಾಜ್ಯದ ಜಿಲ್ಲಾ. ತಾಲೂಕು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ 1800ಕ್ಕೂ ಹೆಚ್ಚು ಕಡೆ ಎಲ್ಇಡಿ ಪರದೆ ಅಳವಡಿಸಿ ಶಿವಕುಮಾರ್ ಪದಗ್ರಹಣ ಸಮಾರಂಭದ ನೇರ ಪ್ರಸಾರಕ್ಕೆ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com