ವಿಧಾನ ಪರಿಷತ್ ಚುನಾವಣೆ: 4 ಸ್ಥಾನ ಬಿಜೆಪಿ ಪಾಲು; ಉಳಿದ 3 ಸೀಟುಗಳಿಗಾಗಿ ತೀವ್ರ ಲಾಬಿ

ಜೂನ್ 30ರಂದು ತೆರವಾಗಲಿರುವ  ರಾಜ್ಯ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಜೂನ್‌ 29ರಂದು ಚುನಾವಣೆ ನಿಗದಿಯಾಗಿದೆ. ವಿಧಾನಸಭೆ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ 4, ಕಾಂಗ್ರೆಸ್‌ 2 ಹಾಗೂ ಜೆಡಿಎಸ್‌ 1 ಸ್ಥಾನ ಗೆದ್ದುಕೊಳ್ಳಬಹುದು. 
ವಿಧಾನ ಸೌಧ
ವಿಧಾನ ಸೌಧ
Updated on

ಬೆಂಗಳೂರು: ಜೂನ್ 30ರಂದು ತೆರವಾಗಲಿರುವ  ರಾಜ್ಯ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಜೂನ್‌ 29ರಂದು ಚುನಾವಣೆ ನಿಗದಿಯಾಗಿದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ  ಆಯ್ಕೆಯಾಗಿದ್ದ ನಜೀರ್‌ ಅಹಮ್ಮದ್‌, ಜಯಮ್ಮ, ಎಂ.ಸಿ. ವೇಣುಗೋಪಾಲ್‌, ಎನ್‌.ಎಸ್‌. ಬೋಸರಾಜು, ಎಚ್‌.ಎಂ. ರೇವಣ್ಣ, ಟಿ.ಎ. ಸರವಣ ಹಾಗೂ ಡಿ.ಯು. ಮಲ್ಲಿಕಾರ್ಜುನ ಅವರ ಸೇವಾ ಅವಧಿ ಅಂತ್ಯವಾಗುತ್ತಿದೆ. 

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿರುವ ಜಯಮ್ಮ, ಬೋಸರಾಜ್, ಹೆಚ್.ಎಂ. ರೇವಣ್ಣ, ನಸೀರ್ ಅಹ್ಮದ್, ಎಂಸಿ ವೇಣುಗೋಪಾಲ್ ( ಕಾಂಗ್ರೆಸ್), ಟಿ.ಎ. ಶರವಣ (ಜೆಡಿಎಸ್), ಡಿ.ಯು. ಮಲ್ಲಿಕಾರ್ಜುನ್ (ಪಕ್ಷೇತರ), ನಾಮ ನಿರ್ದೇಶನಗೊಂಡಿರುವ ಜಯಮಾಲಾ ರಾಮಚಂದ್ರ, ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜಾ, ಇಕ್ಬಾಲ್ ಅಹಮ್ಮದ್ ಸರಡಗಿ, ತಿಪ್ಪಣ್ಣ ಕಮಕನೂರ್ (ಕಾಂಗ್ರೆಸ್), ನಿವೃತ್ತರಾಗಲಿದ್ದಾರೆ.

ವಿಧಾನಸಭೆ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ 4, ಕಾಂಗ್ರೆಸ್‌ 2 ಹಾಗೂ ಜೆಡಿಎಸ್‌ 1 ಸ್ಥಾನ ಗೆದ್ದುಕೊಳ್ಳಬಹುದು. ಈ ಸಂಬಂಧ ಮುಂದಿನ ವಾರ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯಲಿದೆ. ಈಗಾಗಲೇ ಜೆಡಿಎಸ್‍ನಲ್ಲಿ ಆಕಾಂಕ್ಷಿಗಳಿಂದ ಪಕ್ಷದ ನಾಯಕರ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ. ಜೆಡಿಎಸ್‍ನಲ್ಲಿ ಹಲವು ಮಂದಿ ಆಕಾಂಕ್ಷಿಗಳಿದ್ದು, ಇನ್ನೂ ಯಾವುದೇ ತೀರ್ಮಾನವನ್ನು ವರಿಷ್ಠರು ತೆಗೆದುಕೊಂಡಿಲ್ಲ. ವಿಧಾನಸಭೆಯಲ್ಲಿ ಶಾಸಕರನ್ನು ಹೊಂದಿರುವ ಆಧಾರದ ಮೇಲೆ ಜೆಡಿಎಸ್ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ.

ಒಂದು ಸ್ಥಾನಕ್ಕೆ ಸುಮಾರು 10ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.  ಜೆಡಿಎಸ್‍ನಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಮಾಜಿ ಶಾಸಕ ಕೋನರೆಡ್ಡಿ, ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಸಿ.ರಾಜಣ್ಣ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದಾರೆ.

ಶರವಣ ಜೂ.30ರಂದು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ನಿವೃತ್ತಿಯಾಗಲಿದ್ದಾರೆ. ಮತ್ತೊಂದು ಅವಧಿಗೆ ಅವಕಾಶ ನೀಡುವಂತೆ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ. ಮಾಜಿ ಶಾಸಕ ಕೋನರೆಡ್ಡಿ ಅವರು ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಲು ತಮಗೆ ಅವಕಾಶ ಮಾಡಿಕೊಡಬೇಕೆಂದು ಕೋರಿದ್ದಾರೆ.

ರಾಜ್ಯಸಭೆಗೆ ಈ ಬಾರಿ ಸ್ಪರ್ಧೆ ಮಾಡದಿರುವ ಕುಪೇಂದ್ರರೆಡ್ಡಿ ಅವರ ಹೆಸರು ಕೂಡ ವಿಧಾನ ಪರಿಷತ್ ಚುನಾವಣೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಸೇರ್ ಆರ್.ಪ್ರಕಾಶ್ ಅವರು ಕೂಡ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸುವ ಪ್ರಬಲ ಆಕಾಂಕ್ಷಿಯಾಗಿದ್ದಾರೆ.  ಕಳೆದ ವಿಧಾನಸಭೆ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲೂ ಅವಕಾಶ ಸಿಗಲಿಲ್ಲ ಎಂಬ
ಅಸಮಾಧಾನವೂ ಅವರಲ್ಲಿದೆ. ಇದುವರೆಗೂ ವಿಧಾನ ಪರಿಷತ್‍ಗೆ ಅಭ್ಯರ್ಥಿ ಆಯ್ಕೆ ಕುರಿತಂತೆ ಜೆಡಿಎಸ್‍ನಲ್ಲಿ ಯಾವುದೇ  ನಿರ್ಧಾರವಾಗಿಲ್ಲ.

ವಿಧಾನಸಭೆಯ ಸದಸ್ಯರ ಸಂಖ್ಯೆ 223, ಇದರಲ್ಲಿ ನಾಮ ನಿರ್ದೇಶಿತರು ಕೂಡ ಸೇರಿದ್ದಾರೆ. ಪ್ರತಿ ಅಭ್ಯರ್ಥಿ ಗೆಲ್ಲಲು 29 ಮತಗಳು ಬೇಕಾಗಿದೆ. ಕಾಂಗ್ರೆಸ್ ನಲ್ಲಿ 68 ಶಾಸಕರಿದ್ದು ಇಬ್ಬರನ್ನು ಮಾತ್ರ ಆಯ್ಕೆ ಮಾಡಲು ಸಾಧ್ಯ, ಜೆಡಿಎಸ್ ಸಂಖ್ಯೆ 34 ಕೇವಲ ಒಬ್ಬರಿಗೆ ಮಾತ್ರ ಅವಕಾಶ, ನಾಲ್ಕು ಸದಸ್ಯರನ್ನು ಆಯ್ಕೆ ಮಾಡಲು ಬಿಜೆಪಿಗೆ ಅಗತ್ಯ ಸಂಖ್ಯೆಯಿದೆ. ಹೀಗಾಗಿ ಬಿಜೆಪಿಯಲ್ಲಿ ಲಾಬಿ ತೀವ್ರಗೊಂಡಿದೆ. ನಾಮ ನಿರ್ದೇಶನಗೊಂಡ ಐವರಲ್ಲಿ ನಾನು ಇರಲಿಲ್ಲ, ಹೀಗಾಗಿ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವುದಾಗಿ ಬಿಜೆಪಿ ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com