
ಬೆಂಗಳೂರು: ಸೋಮವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಧಾನಪರಿಷತ್ ಚುನಾವಣೆಗಾಗಿ 12 ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಗಿದ್ದು, ಹೈಕಮಾಂಡ್ ಗೆ ರವಾನಿಸಲಾಗಿದೆ.
ಸುನೀಲ್ ವಲ್ಲಾಪುರ್ ಹೊರತುಪಡಿಸಿದಂತೆ ಇತರ ಪಕ್ಷಗಳನ್ನು ತೊರೆದು ಬಿಜೆಪಿಗೆ ಬಂದಿರುವ ಹೆಚ್. ವಿಶ್ವನಾಥ್, ಆರ್. ಶಂಕರ್, ಮತ್ತು ಎಂಟಿಬಿ ನಾಗರಾಜ್ ಅವರನ್ನು ಮೇಲ್ಮನೆಗೆ ಕಳುಹಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಯಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಲಿಕಯ್ಯ ಗುತ್ತೆದಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ನಿರ್ಮಲಾ ಕುಮಾರ್ ಸುರಾನ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಶಂಕರಪ್ಪ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರತಾಪ್ ಸಿಂಹ ನಾಯಕ್ ಅವರ ಹೆಸರನ್ನು ಕೂಡಾ ಹೈಕಮಾಂಡ್ ಗೆ ರವಾನಿಸಲಾಗಿದೆ.
Advertisement