ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಜುಲೈ 2ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದು, ಈ ಕಾರ್ಯಕ್ರಮ ದೇಶದ ಇತಿಹಾಸದಲ್ಲೇ ಹೊಸ ದಾಖಲೆ ಬರೆಯಲಿದೆ. ಕಾಂಗ್ರೆಸ್ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಈ ಬೆಳವಣಿಗೆ ನಾಂದಿ ಹಾಡಲಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಮಾಜಿ ರಾಜ್ಯಾಧ್ಯಕ್ಷೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ
ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್
Updated on: 

ಬೆಳಗಾವಿ: ಜುಲೈ 2ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದು, ಈ ಕಾರ್ಯಕ್ರಮ ದೇಶದ ಇತಿಹಾಸದಲ್ಲೇ ಹೊಸ ದಾಖಲೆ ಬರೆಯಲಿದೆ. ಕಾಂಗ್ರೆಸ್ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಈ ಬೆಳವಣಿಗೆ ನಾಂದಿ ಹಾಡಲಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಮಾಜಿ ರಾಜ್ಯಾಧ್ಯಕ್ಷೆ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮ ನಡೆಸಬೇಕಿರುವುದರಿಂದ ರಾಜ್ಯದ 7800 ಕಡೆಗಳಲ್ಲಿ ದೊಡ್ಡ ಸ್ಕ್ರೀನ್ ಅಳವಡಿಸಿ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುವುದು. ಒಟ್ಟು 10 ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ ಎಂದರು.

ಬೆಳಗಾವಿ ಜಿಲ್ಲೆಯಲ್ಲೂ ಸುಮಾರು 550 ಕಡೆಗಳಲ್ಲಿ ಕಾರ್ಯಕ್ರಮ ವೀಕ್ಷಣೆಯ ವ್ಯವಸ್ಥೆ ಮಾಡಲಾಗುತ್ತಿದೆ. ಜನರು 7676366666 ನಂಬರಿಗೆ ಮಿಸ್ಡ್ ಕಾಲ್ ಕೊಡುವ ಮೂಲಕ ಕಾರ್ಯಕ್ರಮವನ್ನು ಬೆಂಬಲಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com