ಯತ್ನಾಳ್ ರಿಂದ ಸದನದ ಗೌರವಕ್ಕೆ ಧಕ್ಕೆ, ಅವರನ್ನು ಕೂಡಲೇ ಅಮಾನತು ಮಾಡಿ: ಸಿದ್ದರಾಮಯ್ಯ ಆಗ್ರಹ

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ರಿಂದ ಸದನದ ಗೌರವಕ್ಕೆ ಧಕ್ಕೆಯಾಗಿದ್ದು ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ಅಮಾನತು ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ
Updated on: 

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ರಿಂದ ಸದನದ ಗೌರವಕ್ಕೆ ಧಕ್ಕೆಯಾಗಿದ್ದು ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ಅಮಾನತು ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, 'ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ಅಗೌರವ ತೋರಿದ್ದಾರೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು. ಬಿಜೆಪಿ ನಾಯಕರು, ಮಂತ್ರಿಗಳು ಯತ್ನಾಳ್ ಹೇಳಿಕೆಯನ್ನು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ಪಕ್ಷದ ಶಾಸಕನೊಬ್ಬ ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ? ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿ ಎಂದು ಹೇಳಿದ್ದಾರೆ.

ಅಂತೆಯೇ, 'ಸ್ವಾತಂತ್ರ್ಯಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಹಿಂದೆ  ತುರ್ತುಪರಿಸ್ಥಿತಿಯ ಕಾಲದಲ್ಲಿ ಇಂದಿರಾಗಾಂಧಿ ವಿರುದ್ಧವೂ ಪ್ರತಿಭಟಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು. ಸದನಕ್ಕೆ ಅಗೌರವ ತೋರುವ‌ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com