ವಿರೋಧ ಪಕ್ಷದ ನಾಯಕರುಗಳಿಗೆ ಸಿಎಂ ಯಡಿಯೂರಪ್ಪ ಗಣಿತ ಪಾಠ!

ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡುವಾಗ, ರಾಜಕೀಯ ಮಾತನಾಡುವುದು ನನಗೆ ಇಷ್ಟವಿಲ್ಲ. ಆದರೆ, ವಿರೋಧಪಕ್ಷದವರು ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡಿದ್ದಾರೆ. ಅದಕ್ಕೆ ಉತ್ತರ ಕೊಡಲೇಬೇಕು ಎಂದು ಹೇಳಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಶಾಸಕ ಯತ್ನಾಳ್ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಶಾಸಕರು ಸೋಮವಾರ ಸದನದ ಬಾವಿಗಿಳಿದು ಪ್ರತಿ ಭಟನೆ ನಡೆಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡುವಾಗ, ರಾಜಕೀಯ ಮಾತನಾಡುವುದು ನನಗೆ ಇಷ್ಟವಿಲ್ಲ. ಆದರೆ, ವಿರೋಧಪಕ್ಷದವರು ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡಿದ್ದಾರೆ. ಅದಕ್ಕೆ ಉತ್ತರ ಕೊಡಲೇಬೇಕು ಎಂದು ಹೇಳಿದ್ದಾರೆ.

ಒಂದೆರಡು ಮಾತುಗಳನ್ನು ರಾಜಕೀಯವಾಗಿ ಹೇಳಲೇಬೇಕು ಎಂದ ಯಡಿಯೂರಪ್ಪ ಅವರು, ಉಪ ಚುನಾವಣೆಯಲ್ಲಿ 15 ರಲ್ಲಿ 12 ಸ್ಥಾನಗಳನ್ನು ಗೆದ್ದು ಜನರ ಬೆಂಬಲ ನಮ್ಮ ಪಕ್ಷಕ್ಕೆ ಇದೆ ಎಂದು ಸಾಬೀತು ಮಾಡಿದ್ದೇವೆ. ಈ 12 ಸ್ಥಾನಗಳಲ್ಲಿ ಗೆಲುವು ನಮ್ಮ ಸರ್ಕಾರದ ಮತ್ತು ಪಕ್ಷದ ನೈತಿಕ ಗೆಲುವಾಗಿದೆ.

ನಿಮಗೆ ಗೊತ್ತಿರಲಿ, ರಾಜ್ಯದ ಜನತೆ ಸಂಪೂರ್ಣವಾಗಿ ನಮ್ಮ ಜೊತೆಗೆ ಇದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷ ಗೆದ್ದದ್ದು ಒಂದು ಸ್ಥಾನ. ನಾವು ಗೆದ್ದದ್ದು 25 ಮತ್ತು ಮತ್ತೂಂದು.

ನಿಮ್ಮ ಟೀಕೆ ಜನರ ಅಭಿಮತವನ್ನು ಅಪಹಾಸ್ಯ ಮಾಡಿ ದಂತಾಗುತ್ತದೆ. ಇದರಿಂದ ಜನ ನಿಮ್ಮ ಬಗ್ಗೆ ಹಗುರವಾಗಿ ಮಾತನಾಡಲು ಪ್ರಾರಂಭಿಸುತ್ತಾರೆ. ಆದರಿಂದ ನನಗೆ ನಿಮ್ಮ ಬಗ್ಗೆ ಕಾಳಜಿಯಿಂದ ಈ ಸಲಹೆ ಕೊಡುತ್ತಿದ್ದೇನೆ ಎಂದು ಹೇಳಿದರು.

 ಪ್ರವಾಹ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ರಾಜ್ಯ ಸರ್ಕಾರ 4,413 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. 3308 ಕೋಟಿ ಖರ್ಚಾಗಿದೆ. ಕೇಂದ್ರ ಸರ್ಕಾರಕ್ಕೆ 3891 ಕೋಟಿ ನೆರವಿಗೆ ಮನವಿ ಸಲ್ಲಿಸಲಾಯಿತು. ಎನ್‍ಡಿಆರ್‍ಎಫ್‍ನಡಿ 1800 ಕೋಟಿ ರೂ. ಬಿಡುಗಡೆಯಾಗಿದೆ ಎಂದರು.

ಈಗಾಗಲೇ ಮನೆ ಕಳೆದುಕೊಂಡ ಸುಮಾರು 2ಲಕ್ಷ ಜನರಲ್ಲಿ ಪ್ರತಿಯೊಬ್ಬರಿಗೆ ತಲಾ 1 ಲತ್ರ ರೂ ಹಣ ನೀಡಿರುವುದಾಗಿ ಯಡಿಯೂರಪ್ಪ ಸದನದಲ್ಲಿ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com