ಬೆಂಗಳೂರು: ಈಗಾಗಲೇ ಜೆಡಿಎಸ್ ಪಕ್ಷದಿಂದ ಒಂದು ಕಾಲು ಹೊರಗೆ ಇಟ್ಟಿರುವ ಮಾಜಿ ಶಾಸಕ, ಜೆಡಿಎಸ್ ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ, ಪಕ್ಷದಲ್ಲಿ ವ್ಯವಸ್ಥೆಯೇ ಸರಿಯಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಪಕ್ಷದ ವರಿಷ್ಠರು ಸಭೆ ಕರೆದಿದ್ದಾರೆ.
ಬುಧವಾರ ನಾವು ಜೆಡಿಎಸ್ ಶಾಸಕರಾಂಗ ಪಕ್ಷದ ಸಭೆ ಕರೆದಿದ್ದು, ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ಮುಖಂಡ ಮಂಜುನಾಥ್ ಬಹಿರಂಗವಾಗಿ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದದ ಅವರು, ಹೋಗಬೇಕು ಎಂದುಕೊಂಡಿರುವವರು ಹೋಗಲಿ ತಮ್ಮದೇನು ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ.
ಈಗಾಗಲೇ ಜಿಟಿ ದೇವೇಗೌಡ ಮತ್ತು ಗುಬ್ಬಿ ಶ್ರೀನಿವಾಸ್ ಪಕ್ಷಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದ್ದಾರೆ. ಪಕ್ಷದ ಹಾಗೂ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅವರನ್ನು ಬಹುಶ ಪಕ್ಷದಿಂದ ಉಚ್ಚಾಟನೆ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಇನ್ನು ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಅವರ ಆಕ್ರೋಶವು ನಾಯಕತ್ವದ ಬಿಕ್ಕಟ್ಟಿನ ಪ್ರತಿಬಿಂಬವಲ್ಲ. ಅವರು ಪಕ್ಷದ ಶಿಶ್ತಬದ್ದ ಕಾರ್ಯಕರ್ತರಾಗಿದ್ದಾರೆ ಎಂದು ಹೇಳಿದ್ದಾರೆ.
Advertisement