ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ವಿಳಂಬ ಮಾಡದಂತೆ ರಾಹುಲ್ ಬಳಿ ಚರ್ಚೆ- ದಿನೇಶ್ ಗುಂಡೂರಾವ್ 

ಕೆಪಿಸಿಸಿ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ಹೈಕಮಾಂಡ್ ಇನ್ನೂ ನೇಮಕ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ರಾಹುಲ್ ಗಾಂಧಿ ಅವರನ್ನು ಶನಿವಾರ ಭೇಟಿಯಾಗಿದ್ದರು.

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ಹೈಕಮಾಂಡ್ ಇನ್ನೂ ನೇಮಕ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ರಾಹುಲ್ ಗಾಂಧಿ ಅವರನ್ನು ಶನಿವಾರ ಭೇಟಿಯಾಗಿದ್ದರು.

ರಾಹುಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಆದಷ್ಟು ಬೇಗ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಅಗತ್ಯವಿದೆ. ಈ ಸಂಬಂಧ ರಾಹುಲ್ ಗಾಂಧಿಯೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.

ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಹಾಗೂ ಪಕ್ಷದ ಬಲವರ್ದನೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಹೊಸ ಅಧ್ಯಕ್ಷರ ನೇಮಕವನ್ನು ವಿಳಂಬ ಮಾಡದಂತೆ ರಾಹುಲ್ ಗಾಂಧಿ ಬಳಿ ಮನವಿ ಮಾಡಲಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

2019 ಡಿಸೆಂಬರ್ ನಲ್ಲಿ ನಡೆದ ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು. ಜೂನ್ 2019ರಲ್ಲಿ ಕೆಪಿಸಿಸಿಯನ್ನು ವಿಸರ್ಜಿಸಲಾಗಿದ್ದು, ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಮುಂದುವರೆಸಲಾಗಿದೆ. 

ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ನೇಮಿಸಲು ಹೈಕಮಾಂಡ್  ಒಲವಿಗೆ  ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದ ಪ್ರಭಾವಿ ಲಿಂಗಾಯತ ಮುಖಂಡ ಎಂ. ಬಿ. ಪಾಟೀಲ್ ಅವರನ್ನು ನೇಮಿಸುವಂತೆ ಅವರು ಒತ್ತಡ ಹಾಕುತ್ತಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
 

Related Stories

No stories found.

Advertisement

X
Kannada Prabha
www.kannadaprabha.com