ಕಾಂಗ್ರೆಸ್ ಶಾಸಕಾಂಗ ಸಭೆ: ಮಧ್ಯಪ್ರದೇಶ ರಾಜಕೀಯ, ಬಜೆಟ್ ಮೇಲಿನ ಚರ್ಚೆ ಕುರಿತು ಸಮಾಲೋಚನೆ

ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ ಹಾಗೂ ಬಜೆಟ್ ಮೇಲಿನ ಚರ್ಚೆಗೆ ಸಜ್ಜಾಗುವ ಕುರಿತು ಮಾರ್ಗದರ್ಶನ ನೀಡುವ ಸಂಬಂಧ ವಿಧಾನಸಭೆ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಿತು.
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Updated on

ಬೆಂಗಳೂರು: ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ ಹಾಗೂ ಬಜೆಟ್ ಮೇಲಿನ ಚರ್ಚೆಗೆ ಸಜ್ಜಾಗುವ ಕುರಿತು ಮಾರ್ಗದರ್ಶನ ನೀಡುವ ಸಂಬಂಧ ವಿಧಾನಸಭೆ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಿತು.

ಎಲ್ಲಾ ಶಾಸಕರಿಗೂ ಭಾಗವಹಿಸಲು ಸೂಚಿಸಲಾಗಿದ್ದು, ಇಂದಿನ ಸಭೆಯಲ್ಲಿ ಅತ್ಯಂತ ಪ್ರಮುಖವಾಗಿ ಬಜೆಟ್ ಮೇಲಿನ ಚರ್ಚೆಯ ಸಂದರ್ಭ ಶಾಸಕರು ಯಾವ ವಿಚಾರಗಳನ್ನು ಪ್ರಸ್ತಾಪಿಸಬೇಕು, ಯಾರು ಯಾವ್ಯಾವ ವಿಚಾರಗಳ ಮೇಲೆ ಮಾತನಾಡಬೇಕು ಎಂಬ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಯಿತು.

ಇಂದಿನಿಂದ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ. ಈ ಹಿನ್ನೆಲೆ ಹಿರಿಯ ಸದಸ್ಯರು ಚರ್ಚಿಸಬೇಕಾದ ವಿಚಾರಗಳು ಕಿರಿಯ ಸದಸ್ಯರು ಪ್ರಸ್ತಾಪಿಸಬೇಕಾಗಿರುವ ವಿಚಾರಗಳ ಕುರಿತು ಸಿದ್ದರಾಮಯ್ಯ ಮಾರ್ಗದರ್ಶನ ನೀಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಹಲವು ಭಾಗ್ಯಗಳಿಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕತ್ತರಿ ಹಾಕಿದೆ. ಆರ್ಥಿಕ ಸಂಪನ್ಮೂಲ ಕೊರತೆಯ ಕಾರಣವನ್ನು ಇದಕ್ಕೆ ನೀಡಿದೆ. ಹಿನ್ನೆಲೆ ತಮ್ಮ ಯೋಜನೆಗಳನ್ನು ಕೈಬಿಟ್ಟಿರುವ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.

ಇದಕ್ಕೆ ಎದುರಾಗುವ ಸರ್ಕಾರದ ಪ್ರತಿವಾದವನ್ನು ಸಮರ್ಥವಾಗಿ ತಮ್ಮ ಸದಸ್ಯರು ಹೇಗೆ ಎದುರಿಸಬೇಕು ಎಂಬ ಕುರಿತು ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಾರ್ಗದರ್ಶನ ಮಾಡಿದರು. ವಿಧಾನಮಂಡಲದ ಉಭಯ ಸದನಗಳಲ್ಲಿಯೂ ಆಡಳಿತ ಪಕ್ಷವನ್ನು ಸಮರ್ಥವಾಗಿ ಎದುರಿಸುವ ಪ್ರತಿಪಾದನೆಯನ್ನು ಮಂಡಿಸಬೇಕು ಎಂಬ ಕುರಿತು ಈ ಸಂದರ್ಭ ಶಾಸಕರಿಗೆ ಸಿದ್ದರಾಮಯ್ಯ ಮಾಹಿತಿ ನೀಡಿದರು. ಇನ್ನು ಪ್ರಮುಖವಾಗಿ ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲಕ್ಕೊಳಗಾಗಿ ಬೆಂಗಳೂರಿಗೆ‌ ಬಂದಿಳಿದಿರುವ ಕಾಂಗ್ರೆಸ್ ಶಾಸಕರ ನಡೆ ಅಲ್ಲಿನ ರಾಜಕೀಯ ಪರಿಸ್ಥಿತಿ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com