ಡಿ ಕೆ ಶಿವಕುಮಾರ್
ರಾಜಕೀಯ
ಕಾಂಗ್ರೆಸ್ ನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್
ಕಾಂಗ್ರೆಸ್ ನ್ನು ನಿರ್ನಾಮ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ನಾಯಕರು ಬಂದು ಹೋಗಬಹುದು, ಅದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ನ್ನು ನಿರ್ನಾಮ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ನಾಯಕರು ಬಂದು ಹೋಗಬಹುದು, ಅದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರದ ಬಿಕ್ಕಟ್ಟು, ಪ್ರಮುಖ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ಸೇರಿದಂತೆ 23 ಶಾಸಕರ ರಾಜೀನಾಮೆ ಬಗ್ಗೆ ಬೆಂಗಳೂರಿನಲ್ಲಿಂದು ಶಿವಕುಮಾರ್ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಮಧ್ಯ ಪ್ರದೇಶದಿಂದ ಬೆಂಗಳೂರಿಗೆ ಬಂದಿರುವ ಶಾಸಕರು ಯಾರೂ ತಮ್ಮ ಸದಸ್ಯತ್ವವನ್ನು ಕಳೆದುಕೊಳ್ಳುವ ಮನಸ್ಥಿತಿಯಲ್ಲಿಲ್ಲ. ತಮ್ಮ ಮುಂದಿನ ರಾಜಕೀಯ ಕಠಿಣತೆಯನ್ನು ಈ ಶಾಸಕರು ಅರ್ಥ ಮಾಡಿಕೊಂಡು ವಾಪಸ್ಸು ಹೋಗಿ ಸರ್ಕಾರವನ್ನು ಉಳಿಸಲಿದ್ದಾರೆ ಎಂಬ ನಂಬಿಕೆಯಿದೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ