
ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಮಂಗಳವಾರ ನಡೆದ ಮತದಾನ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಆರ್ ಆರ್ ನಗರದಲ್ಲಿ ಅತಿ ಕಡಿಮೆ ಹಾಗೂ ಶಿರಾದಲ್ಲಿ ಹೆಚ್ಚು ಮತದಾನವಾಗಿದೆ.
ಕೊರೋನಾ ಮುಂಜಾಗ್ರತೆಯೊಂದಿಗೆ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.
ಆರ್ ಆರ್ ನಗರದಲ್ಲಿ ಸಂಜೆ ಐದು ಗಂಟೆಯವರೆಗೆ 39.05 ರಷ್ಟು ಮತದಾನವಾಗಿದೆ. ತುಮಕೂರು ಜಿಲ್ಲೆಯ ಶಿರಾದಲ್ಲಿ ಕೊರೋನಾ ಹೊರತಾಗಿಯೂ ಬಿರುಸಿನ ಮತದಾನ ನಡೆದಿದ್ದು, ಸಂಜೆ ಐದು ಗಂಟೆಯವರೆಗೆ ಶೇ. 77.34 ರಷ್ಟು ಮತದಾನವಾಗಿದೆ.
ಆರ್ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕುಸುಮಾ, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್ನಿಂದ ಕೃಷ್ಣಮೂರ್ತಿ ಸ್ಪರ್ಧಿಸಿದ್ದರೆ. ಶಿರಾದಲ್ಲಿ ಕಾಂಗ್ರೆಸ್ನಿಂದ ಟಿ.ಬಿ ಜಯಚಂದ್ರ, ಬಿಜೆಪಿಯಿಂದ ರಾಜೇಶ್ ಗೌಡ ಹಾಗೂ ಜೆಡಿಎಸ್ ನ ಅಮ್ಮಾಜಮ್ಮ ಅಭ್ಯರ್ಥಿಗಳಾಗಿದ್ದಾರೆ.
ಎರಡು ಕ್ಷೇತ್ರಗಳಿಂದ, ಒಟ್ಟು 1,008 ಬೂತ್ ಗಳನ್ನು ಸ್ಥಾಪಿಸಲಾಗಿತ್ತು. ಎಲ್ಲಾ ಬೂತ್ ಗಳಲ್ಲೂ ಥರ್ಮಲ್ ಸ್ಕ್ಯಾನರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಕೊರೋನಾ ಪಾಸಿಟಿವ್ ಇದ್ದವರು ಕೂಡ ಇಂದು ತಮ್ಮ ಹಕ್ಕು ಚಲಾಯಿಸಿದ್ದಾರೆ.
Advertisement