ವಿಪಕ್ಷ ನಾಯಕರ ಸ್ಥಾನಮಾನ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ: ಸಿದ್ದುಗೆ ಸಿಎಂ ಗುದ್ದು

ವಿರೋಧ ಪಕ್ಷದ ನಾಯಕರ ಸ್ಥಾನಮಾನ ಬದಲಾವಣೆ ಬಗ್ಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದೆಯೇ ಹೊರತು ಯಡಿಯೂರಪ್ಪನ ಸ್ಥಾನ ಬದಲಾವಣೆ ಬಗ್ಗೆ ಅಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ
Updated on: 

ಬೆಂಗಳೂರು: ವಿರೋಧ ಪಕ್ಷದ ನಾಯಕರ ಸ್ಥಾನಮಾನ ಬದಲಾವಣೆ ಬಗ್ಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದ್ದೆಯೇ ಹೊರತು ಯಡಿಯೂರಪ್ಪನ ಸ್ಥಾನ ಬದಲಾವಣೆ ಬಗ್ಗೆ ಅಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾಗಲಿದ್ದಾರೆಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕಾವೇರಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು,  ಶಿರಾ ಹಾಗೂ ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಸೋಲಲಿದ್ದು ಬಿಜೆಪಿ ಅಭ್ಯರ್ಥಿ ಗಳು ಗೆಲ್ಲಲಿದ್ದಾರೆ. ಎರಡೂ ಕ್ಷೇತ್ರಗಳನ್ನು ಸೋತ ನಿಮ್ಮನ್ನು ಪಕ್ಷದ ಹೈಕಮಾಂಡ್ ವಿಪಕ್ಷ ನಾಯಕ ಸ್ಥಾನ ದಿಂದ ಕೆಳಗಿಳಿಸುವ ಚಿಂತನೆ ನಡೆಸುತ್ತಿದೆ ಎಂದರು.

ಉಪ ಚುನಾವಣೆಯಲ್ಲಿ ಗೆದ್ದ ಬಿಜೆಪಿಗೆ ಪಕ್ಷದ ನಾಯಕತ್ವ ಅಭಿನಂದನೆ ಸಲ್ಲಿಸಲಿದ್ದು, ಬಿಜೆಪಿ ರಾಜ್ಯದಲ್ಲಿ ಮತ್ತಷ್ಟು ಸದೃಢಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿದ್ದುಗೆ ಗುದ್ದು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com