ಆರ್.ಆರ್.ನಗರದಲ್ಲಿ ಮತದಾನ ಕಡಿಮೆಯಾಗಿರುವುದು ಕಾಂಗ್ರೆಸ್ ಗೆ ಲಾಭ: ಸಿದ್ದರಾಮಯ್ಯ

ಆರ್.ಆರ್. ನಗರದಲ್ಲಿ ಮತದಾನದ ಪ್ರಮಾಣ ಕಡಿಮೆ ಆಗಿರುವುದರಿಂದ ಕಾಂಗ್ರೆಸ್ ಗೆ ಲಾಭವಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ಆರ್.ಆರ್. ನಗರದಲ್ಲಿ ಮತದಾನದ ಪ್ರಮಾಣ ಕಡಿಮೆ ಆಗಿರುವುದರಿಂದ ಕಾಂಗ್ರೆಸ್ ಗೆ ಲಾಭವಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ತಮಗೆ ಸಿಕ್ಕ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ. ಮತದಾನದ ಪ್ರಮಾಣ ಕಡಿಮೆ ಆಗಿರುವುದು ನಮಗೆ ಲಾಭವಾಗಲಿದೆ ಎಂದರು.

ಭೂ ಸುಧಾರಣಾ ಕಾಯ್ದೆ ವಿರುದ್ಧ ಮತ್ತೆ ಹೋರಾಟ ನಡೆಸಲಾಗುವುದು. ಈ ಕಾಯ್ದೆಗಳ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು. ಸರ್ಕಾರಿ‌ ನೌಕರರು ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಬಾರದೆಂದು ಎಲ್ಲಿಯೂ ಇಲ್ಲ. ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಲವ್ ಜಿಹಾದ್ ವಿರುದ್ಧ ಕಾನೂನಿನ ಅಸ್ತ್ರ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com