ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ: ಸಚಿವ ಎಸ್. ಟಿ. ಸೋಮಶೇಖರ್

ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಬೇರು ಮಟ್ಟದಿಂದ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೆ ನಾವು ಶ್ರಮ ಹಾಕುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಎಸ್. ಟಿ. ಸೋಮಶೇಖರ್
ಎಸ್. ಟಿ. ಸೋಮಶೇಖರ್
Updated on

ಪಿರಿಯಾಪಟ್ಟಣ: ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಬೇರು ಮಟ್ಟದಿಂದ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೆ ನಾವು ಶ್ರಮ ಹಾಕುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬೆಟ್ಟದಪುರದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಎಸ್. ಟಿ. ಸೋಮಶೇಖರ್ ,  ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಘೋಷಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ತ್ವರಿತವಾಗಿ ಸಂಘಟನೆ ಮಾಡಿ ಕಾರ್ಯಕರ್ತರು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ನಿಮ್ಮ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಹೇಗೆ ನಮ್ಮ ಚುನಾವಣೆಗಳಿಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೆವೋ ಹಾಗೆಯೇ ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೂ ನಾವು ಅದೇ ರೀತಿ ದುಡಿಯಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿರುವುದಾಗಿ ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com