ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶಿಲ್ ನಮೋಶಿಗೆ ಗೆಲುವು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎರಡನೇ ಪ್ರಾಶಸ್ತ್ಯದ  ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ.
ಶಶೀಲ್ ನಮೋಶಿ
ಶಶೀಲ್ ನಮೋಶಿ
Updated on: 

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎರಡನೇ ಪ್ರಾಶಸ್ತ್ಯದ  ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ.

ಚುನಾವಣಾಧಿಕಾರಿ ಡಾ.ಎನ್.ವಿ.ಪ್ರಸಾದ  ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದು , ಶಶೀಲ್ ಜಿ. ನಮೋಶಿಗೆ ಗೆಲುವಿನ ಪ್ರಮಾಣ ಪತ್ರ ವಿತರಣೆ ಮಾಡಿದರು.

ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಒಟ್ಟಾರೆ ಕಣದಲ್ಲಿದ್ದ ಐದು ಅಭ್ಯರ್ಥಿಗಳಲ್ಲಿ ಅತ್ಯಂತ ಕಡಿಮೆ ಮತ ಪಡೆದ ವಾಟಾಳ್ ಪಕ್ಷದ ವಾಟಾಳ ನಾಗರಾಜ, ಸ್ವತಂತ್ರ ಅಭ್ಯರ್ಥಿ ಡಾ.ಚಂದ್ರಕಾಂತ ಸಿಂಗೆ ಹಾಗೂ ಜೆ.ಡಿ.ಎಸ್. ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಅವರನ್ನು ಕ್ರಮವಾಗಿ ಎಲಿಮಿನೇಟ್ ಮಾಡಿದ ನಂತರ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿ ಶಶೀಲ್ ನಮೋಶಿ 10,212 ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು 7,082 ಮತ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com