ಶಿರಾ, ಆರ್.ಆರ್. ನಗರದಲ್ಲಿ ಬಿಜೆಪಿ ಗೆಲುವು: ಹಿನ್ನೆಲೆಗೆ ಸರಿದ ಯಡಿಯೂರಪ್ಪ ನಾಯಕತ್ವ ಬದಲಾವಣೆ ಪ್ರಶ್ನೆ

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ
ಯಡಿಯೂರಪ್ಪ
ಯಡಿಯೂರಪ್ಪ
Updated on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ. ಶಿರಾದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದ್ದು, ಆರ್.ಆರ್. ನಗರ ಕ್ಷೇತ್ರವನ್ನು ಕಾಂಗ್ರೆಸ್ ನಿಂದ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಈ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಲ ಬಂದಿದ್ದು, ನಾಯಕತ್ವ ಬದಲಾವಣೆ ಪ್ರಶ್ನೆ ಹಿನ್ನೆಲೆಗೆ ಸರಿದಿದೆ. ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 57,672 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಮುನಿರತ್ನ ಅವರು ಒಂದು 1,25,734 ಮತ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ 67,7098, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಅವರಿಗೆ 10,251 ಮತಗಳು ಲಭಿಸಿವೆ.

ಗೆಲುವಿನ ನಂತರ ಶಿರಾ ಕ್ಷೇತ್ರದ ಅಭ್ಯರ್ಥಿ ಡಾ. ರಾಜೇಶ್ ಗೌಡ ಪ್ರತಿಕ್ರಿಯಿಸಿ, ಕಾರ್ಯಕರ್ತರು, ಮುಖಂಡರ ಸತತ ಪರಿಶ್ರಮ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳು ಗೆಲುವಿಗೆ ವರದಾನವಾಗಿದೆ. ತಮ್ಮ ಅವಧಿ ಬಹಳ ಕಡಿಮೆ ಇದ್ದು, ಕ್ಷೇತ್ರಕ್ಕೆ ಆಗಬೇಕಿರುವ ಬಾಕಿ ಕೆಲಸಗಳನ್ನು ತ್ವರಿತವಾಗಿ ಮಾಡಲು ಪ್ರಥಮ ಆದ್ಯತೆ ನೀಡಲಾಗುವುದು ಎಂದು ರಾಜೇಶ್ ಗೌಡ ಹೇಳಿದರು. ಈ ನಡುವೆ ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪ್ರತಿಕ್ರಿಯಿಸಿ, ಕ್ಷೇತ್ರದ ಮತದಾರರ ಸೇವೆಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ.

ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಶಕ್ತಿಮೀರಿ ಪ್ರಯತ್ನ ಮಾಡುವುದಾಗಿ ತಿಳಿಸಿ, ಇದು ಕ್ಷೇತ್ರದ ಜನತೆಯ ಗೆಲುವು ಎಂದು ಮುನಿರತ್ನ ಹೇಳಿದ್ದಾರೆ. ಫಲಿತಾಂಶ ಪ್ರಕಟಗೊಂಡ ನಂತರ ಮುನಿರತ್ನ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಗೆಲುವಿನ ಸಂತಸ ಹಂಚಿಕೊಂಡರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com