ಪಂಚಾಯತ್ ಚುನಾವಣೆ ಹಿನ್ನೆಲೆ: ಪಕ್ಷಕ್ಕೆ ಸೇರಲು ಎಸ್‍ಸಿಡಿಸಿಸಿ ಅಧ್ಯಕ್ಷ ರಾಜೇಂದ್ರ ಕುಮಾರ್ ಗೆ ಬಿಜೆಪಿ ಆಹ್ವಾನ

ಶೀಘ್ರವೇ ನಡೆಯಲಿರಿವ ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತಮ್ಮ ಪಕ್ಷ ಸೇರಿಕೊಳ್ಳುವಂತೆ ದಕ್ಷಿಣ ಕೆನರಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಆಹ್ವಾನ ಕೊಟ್ಟಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮೀಣ ಬಾಗಗಳಲ್ಲಿ ರಾಜೇಂದ್ರ ಕುಮಾರ್ ಸಾಕಷ್ಟು ಪ್ರಭಾವವನ್ನು ಹೊಂದಿದ್ದಾರೆ.
ಪಂಚಾಯತ್ ಚುನಾವಣೆ ಹಿನ್ನೆಲೆ: ಪಕ್ಷಕ್ಕೆ ಸೇರಲು ಎಸ್‍ಸಿಡಿಸಿಸಿ ಅಧ್ಯಕ್ಷ ರಾಜೇಂದ್ರ ಕುಮಾರ್ ಗೆ ಬಿಜೆಪಿ ಆಹ್ವಾನ
Updated on: 

ಮಂಗಳೂರು: ಶೀಘ್ರವೇ ನಡೆಯಲಿರಿವ ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತಮ್ಮ ಪಕ್ಷ ಸೇರಿಕೊಳ್ಳುವಂತೆ ದಕ್ಷಿಣ ಕೆನರಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಆಹ್ವಾನ ಕೊಟ್ಟಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮೀಣ ಬಾಗಗಳಲ್ಲಿ ರಾಜೇಂದ್ರ ಕುಮಾರ್ ಸಾಕಷ್ಟು ಪ್ರಭಾವವನ್ನು ಹೊಂದಿದ್ದಾರೆ.

ಭಾನುವಾರ ಮಂಗಳೂರಿನಲ್ಲಿ ನಡೆದ 67 ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಪಕ್ಷಕ್ಕೆ ಸೇರಲು ರಾಜೇಂದ್ರ ಕುಮಾರ್ ಅವರಿಗೆ ಮುಕ್ತ ಆಹ್ವಾನ ನೀಡಿದರು,"ಅವರು ಸಹಕಾರ ಕ್ಷೇತ್ರದಲ್ಲಿ ಹೆಚ್ಚಿನ ಎತ್ತರದ ಸ್ಥಾನ ಪಡೆಯಲು ಇದು ರಹದಾರಿಯಾಗಲಿದೆ" ಎಂದಿದ್ದಾರೆ. 

ಇದೇ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ರಾಜೇಂದ್ರ ಕುಮಾರ್ ಅವರನ್ನು ಸಹಕಾರ ಕ್ಷೇತ್ರದ ದ್ರೋಣ ಎಂದು ಬಣ್ಣಿಸಿದರು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿಹೆಸರಾಗಲು ಬೇಕಾದ ಎಲ್ಲಾ ಗುಣಲಕ್ಷಣಗಳೂ ಅವರಲ್ಲಿದೆ ಎಂದರು.

ಕರ್ನಾಟಕ ರಾಜ್ಯ ಸಹಕಾರ ಒಕ್ಕೂಟದ ಪ್ರಸ್ತುತ ಅಧ್ಯಕ್ಷರೂ ಆಗಿರುವ 72 ವರ್ಷದ ರಾಜೇಂದ್ರ ಕುಮಾರ್ ಕಾಂಗ್ರೆಸ್ ಸದಸ್ಯರಾಗಿದ್ದಾರೆ ಮತ್ತು 2019 ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸ್ಥಾನದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ 27 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾಗಿ ಸತತವಾಗಿ ಆಯ್ಕೆಯಾಗುವ ಮೂಲಕ ಅವರು ದಾಖಲೆ ನಿರ್ಮಿಸಿದ್ದಾರೆ.

ಕರಾವಳಿಯು ತನ್ನ ಭದ್ರಕೋಟೆಯಾಗಿದ್ದರೂ ಬಿಜೆಪಿಗೆ ಬ್ಯಾಂಕ್ ಚುನಾವಣೆಯಲ್ಲಿ ಯಶಸ್ಸನ್ನು ಸವಿಯಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಿಗಿಂತ ಭಿನ್ನವಾಗಿ ಕರಾವಳಿಯ ಪಂಚಾಯತ್ ಚುನಾವಣೆಗಳಲ್ಲಿ ಕೇಸರಿ ಪಕ್ಷಕ್ಕೆ ದೊಡ್ಡ ಯಶಸ್ಸನ್ನು ಕಾಣಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ರಾಜೇಂದ್ರ ಕುಮಾರ್ ಅವರನ್ನು ಒಅಕ್ಷಕ್ಕೆ ಸೇರಿಸಿಕೊಳ್ಳುವುದರ ಹಿಂದೆ ಕೇವಲ ಪಂಚಾಯತ್ ಚುನಾವಣೆಗಳ ಗೆಲುವಷ್ಟೇ ಅಲ್ಲದೆ 2024 ರ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುನ್ನಡೆ ಸಾಧಿಸುವಲ್ಲಿ ಇದು ಸಹಾಕಾರಿಯಾಗಲಿದೆಎಂದು ಬಿಜೆಪಿ ನಂಬಿದೆ. 400 ಕ್ಕೂ ಹೆಚ್ಚು ಸಹಕಾರಿ ಸಂಘಗಳನ್ನು ಹೊಂದಿರುವ ಡಿಸಿಸಿ ಬ್ಯಾಂಕ್ ಗ್ರಾಮೀಣ ಪ್ರದೇಶಗಳಲ್ಲಿ ಬಲವಾದ ಜಾಲವನ್ನು ಹೊಂದಿದ್ದು, ಪಂಚಾಯತ್ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಈ ಸಿದ್ದತೆ ನಡೆಸಿದೆ.

ಆದಾಗ್ಯೂ, ರಾಜೇಂದ್ರ ಕುಮಾರ್ ಅವರ ಆಪ್ತ ಮೂಲಗಳು ಅವರು ಬಿಜೆಪಿಗೆ ಸೇರುವುದು ಹೆಚ್ಚಿನ ಮಟ್ಟಿಗೆ ಅಸಾಧ್ಯ  ಎಂದು ಭಾವಿಸಿದ್ದಾರೆ. ಅವರನ್ನು ಬಿಜೆಪಿಗೆ ಸೇರಿಕೊಳ್ಳಲು ಮನವೊಲಿಸುವುದು ಕೇಸರಿ ಪಕ್ಷಕ್ಕೆ ಇದು ಮೊದಲ ಪ್ರಯತ್ನವಲ್ಲ  ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಮತ್ತು ಕಾಂಗ್ರೆಸ್ ಮುಖಂಡ ಸದಾಶಿವ ಉಳ್ಳಾಲ್ ಹೇಳಿದ್ದಾರೆ, 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com