ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮಹಾಘಟ್ಬಂಧನ್ ಮುಂದುವರೆಯಲಿದೆ: ದಿನೇಶ್ ಗುಂಡೂರಾವ್

ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೂಡ ಮಹಾಘಟಬಂಧನ್ ಮುಂದುವರಿಯಲಿದೆ ಎಂದು ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Updated on: 

ಬೆಂಗಳೂರು: ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೂಡ ಮಹಾಘಟಬಂಧನ್ ಮುಂದುವರಿಯಲಿದೆ ಎಂದು ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಟ್ವೀಟ್ ಮೂಲಕ ಈ ಮಾಹಿತಿ ನೀಡಿರುವ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಇತರ ಪಕ್ಷಗಳ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಇದರಿಂದಾಗಿ 2019ರ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಲಭಿಸಿತ್ತು. ಇದೀಗ ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಯಲಿದೆ. ಈ ಮಹಾಘಟಬಂಧನ್ ಬಲಿಷ್ಠಗೊಳಿಸಲು ಕಾಂಗ್ರೆಸ್ ತನ್ನದೇ ಬಹುಮುಖ್ಯ ಪಾತ್ರ ನಿಭಾಯಿಸಲಿದೆ ಎಂದು ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಎಂಕೆ ಸ್ಟ್ಯಾಲಿನ್ ನೇತೃತ್ವದ ಕಾಂಗ್ರೆಸ್ ಒಳಗೊಂಡ ಮಹಾಘಟಬಂಧನ್ 38 ಸ್ಥಾನಗಳನ್ನು ಗೆಲ್ಲುವಲ್ಲಿ ಸಫಲವಾಗಿತ್ತು. ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಾಗೂ ಎನ್ ಡಿಎ ಮೈತ್ರಿಕೂಟ ಕೇವಲ ಒಂದು ಸ್ಥಾನ ಮಾತ್ರ ಗೆಲ್ಲುವಲ್ಲಿ ಸಫಲವಾಗಿತ್ತು. ಈ ಮೂಲಕ ಮಹಾಘಟಬಂಧನ್ ತಮಿಳುನಾಡಿನಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಹೀನಾಯವಾಗಿ ಸೋಲಿಸಿತ್ತು.

 ಇದೀಗ ಬಿಹಾರದಲ್ಲಿ ಮಹಾಘಟಬಂಧನ್ ವಿಫಲವಾದ ಹಿನ್ನೆಲೆ ತಮಿಳುನಾಡಿನಲ್ಲಿಯೂ ಕಾಂಗ್ರೆಸ್ ಪ್ರತ್ಯೇಕವಾಗಿ ಚುನಾವಣೆ ಎದುರಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಲೋಕಸಭೆ ಯಶಸ್ಸು ವಿಧಾನಸಭೆ ಚುನಾವಣೆಯಲ್ಲಿ ಮುಂದುವರಿಯಲಿದೆ ಎಂದು ಹೇಳುವ ಮೂಲಕ ದಿನೇಶ್ ಗುಂಡೂರಾವ್ ಕೇಳಿಬಂದಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com