ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ನನಗೆ ಗೊತ್ತಾಗಲಿದೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಸಿಎಂ ಯಡಿಯೂರಪ್ಪ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇನ್ನು 2-3 ದಿನಗಳಲ್ಲಿ ನನಗೆ ಗೊತ್ತಾಗಲಿದೆ, ಕೇಂದ್ರ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇನ್ನು 2-3 ದಿನಗಳಲ್ಲಿ ನನಗೆ ಗೊತ್ತಾಗಲಿದೆ, ಕೇಂದ್ರ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರ ಜೊತೆ ಮಾತನಾಡಿದ್ದೇನೆ, ಅವರು ಇನ್ನೆರಡು ಮೂರು ದಿನಗಳಲ್ಲಿ ತೀರ್ಮಾನ ಹೇಳಲಿದ್ದಾರೆ, ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗುತ್ತೇನೆ ಎಂದರು.

ಸಚಿವ ಸಂಪುಟ ವಿಸ್ತರಣೆ ಸಂಬಂಧ ನಿನ್ನೆ  ದೆಹಲಿಗೆ ಹೋಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ. ಪ್ರಧಾನಿ ಮೋದಿಯವರನ್ನಾಗಲಿ, ಅಮಿತ್ ಶಾ ಅವರ ಭೇಟಿಗೆ ಅವಕಾಶ ಸಿಗಲಿಲ್ಲ. ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಯಾವುದೇ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಜೆ.ಪಿ. ನಡ್ಡಾ ಅವರ ಜೊತೆ ಚರ್ಚಿಸುವಾಗ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಯಡಿಯೂರಪ್ಪನವರು ನೀಡಿದ್ದಾರೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com