ಸಚಿವರುಗಳ ಭಿನ್ನಾಭಿಪ್ರಾಯ ಬಗೆಹರಿಸುವ ಸಾಮರ್ಥ್ಯ ಯಡಿಯೂರಪ್ಪ ಅವರಿಗಿದೆ: ಗೋಪಾಲಯ್ಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ, ಸಿಎಂ ಯಡಿಯೂರಪ್ಪ ತಮ್ಮ ಅಧಿಕಾರವಧಿಯನ್ನೂ ಪೂರ್ಣಗೊಳಿಸುತ್ತಾರೆ ಎಂದು ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ.
ಗೋಪಾಲಯ್ಯ
ಗೋಪಾಲಯ್ಯ
Updated on

ಹಾಸನ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ, ಸಿಎಂ ಯಡಿಯೂರಪ್ಪ ತಮ್ಮ ಅಧಿಕಾರವಧಿಯನ್ನೂ ಪೂರ್ಣಗೊಳಿಸುತ್ತಾರೆ ಎಂದು ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು ಸಚಿವರುಗಳ ಮಧ್ಯೆ ಇರುವ ಭಿನ್ನಾಬಿಪ್ರಾಯ ಮತ್ತು ಅಸಮಾಧಾನವನ್ನು ಬಗೆಹರಿಸುವ ಸಾಮರ್ಥ್ಯ ಯಡಿಯೂರಪ್ಪ ಅವರಿಗಿದೆ, ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ಆದೇಶದಂತೆ ನಡೆಯಲಿದೆ, ಹೊಸಬರು, ಹಳಬರು ಎಂಬ ಬೇಧಭಾವವಿಲ್ಲ,  ಎಲ್ಲರಿಗೂ ಒಂದೇ ರೀತಿಯ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಇನ್ನೂ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇಲಾಖೆಯ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲು ತೆರಳಿದ್ದಾರೆ ಎಂದು ಗೋಪಾಲಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com