
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಾಥರಸ್‌ಗೆ ಹೋಗದಂತೆ ಪೊಲೀಸರ ಮೂಲಕ ತಡೆ ಹಾಕಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಯೋಗಿನೋ, ರೋಗಿನೋ ಗೊತ್ತಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸೂಚನೆಯಂತೆ ಪೊಲೀಸರು ರಾಹುಲ್ ಗಾಂಧಿಯನ್ನು ತಡೆದ್ದಾರೆ. ಯೋಗಿ ಆದಿತ್ಯನಾಥ್ ಸಿಎಂ ಆಗಿ ಮುಂದುವರೆಯಬಾರದು ಕೂಡಲೇ ರಾಜೀನಾಮೆ ನೀಡಲಿ. ಯೋಗಿನೋ ಆತ ರೋಗಿನೋ ಗೊತ್ತಿಲ್ಲ. ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಯೋಗಿ ಆದಿತ್ಯನಾಥರ ಸರ್ಕಾರ ಕಾನೂನು ಸುವ್ಯವಸ್ಥೆ ಹಾಳು ಮಾಡಿದೆ. ಪೊಲೀಸರು ಸರ್ವಾಧಿಕಾರಿ ರೀತಿಯಲ್ಲಿ ವರ್ತನೆ ಮಾಡ್ತಿದ್ದಾರೆ. ಸಂತ್ರಸ್ತೆ ಮನೆಗೆ ಹೋಗಿ ಸಾಂತ್ವನ ಹೇಳಲು ಹೋಗುತ್ತಿದ್ದಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಅವಕಾಶ ನೀಡದಿರುವುದು ಸರ್ವಾಧಿಕಾರದ ಪರಮಾವಧಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಕಿಡಿಕಾರಿದ್ದಾರೆ.
Advertisement