ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು (ಜಾತಿ ಗಣತಿ) ಸರ್ಕಾರ ಕೂಡಲೇ ಸ್ವೀಕಾರ ಮಾಡಬೇಕು. ಇಲ್ಲದಿದ್ದರೆ ಹಿಂದುಳಿದ ಜಾತಿಗಳ ಒಕ್ಕೂಟವು ಬೀದಿಗಿಳಿದು ಹೋರಾಡಲಿದ್ದು ಹೋರಾಟಕ್ಕೆ ನಾನೂ ಬೆಂಬಲ ನೀಡುತ್ತೇನೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿಸಿ ಅವರು, ರಾಜ್ಯದಲ್ಲಿನ ಜನರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿ ಜನರ ಸ್ಥಿತಿಗತಿಗೆ ಆಧಾರದ ಮೇಲೆ ಸರ್ಕಾರದ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಜನಗಣತಿ ಆದೇಶ ಮಾಡಲಾಗಿತ್ತು.
ನನ್ನ ಅವಧಿಯಲ್ಲಿ ವರದಿ ಪೂರ್ಣ ಸಿದ್ಧವಾಗಿರಲಿಲ್ಲ. ಇದೀಗ ವರದಿ ಸಿದ್ಧವಾಗಿದ್ದು, ಸರ್ಕಾರ ಸ್ವೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೆಲವರು ಸಿದ್ದರಾಮಯ್ಯ ಇದ್ದಾಗಲೇ ವರದಿ ತೆಗೆದುಕೊಳ್ಳಬಹುದಿತ್ತು ಎಂದು ಹೇಳುತ್ತಾರೆ. ನನ್ನ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ. ವರದಿ ಪೂರ್ಣವಾಗದಿದ್ದರೆ ಆಯೋಗದಿಂದ ನಾನು ಕಿತ್ತುಕೊಳ್ಳಲು ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
Advertisement