ರಂಗೇರುತ್ತಿದೆ ಉಪಚುನಾವಣೆ ಸಮರ: ಜೆಡಿಎಸ್-ಕಾಂಗ್ರೆಸ್ ನಾಯಕರ ನಡುವೆ ವೈಯಕ್ತಿಕ ವಾಗ್ದಾಳಿ 

ಉಪಚುನಾವಣೆ ಕಣ ರಂಗೇರುತ್ತಿದ್ದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಸಮರ ಕೂಡ ಜೋರಾಗುತ್ತಿದೆ. ಹಳೇ ದೋಸ್ತಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಗುದ್ದಾಟ ಮತ್ತೆ ಮುನ್ನೆಲೆಗೆ ಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಉಪಚುನಾವಣೆ ಕಣ ರಂಗೇರುತ್ತಿದ್ದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಸಮರ ಕೂಡ ಜೋರಾಗುತ್ತಿದೆ. ಹಳೇ ದೋಸ್ತಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಗುದ್ದಾಟ ಮತ್ತೆ ಮುನ್ನೆಲೆಗೆ ಬಂದಿದೆ. 

ಜೆಡಿಎಸ್ ಹಾಗೂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮದೇ ಧಾಟಿಯಲ್ಲಿ ಮಾತಿನ ಬಾಣಗಳನ್ನು ಪ್ರಯೋಗಿಸಿದ್ದಾರೆ. 

ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಹೆಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡ ಅವರ ಕಣ್ಣೀರಿನ ಬಗ್ಗೆ ಲೇವಡಿ ಮಾಡಿದ್ದಾರೆ.

ಇದಕ್ಕೆ ತೀವ್ರವಾಗಿ ಕಿಡಿಕಾರಿರುವ ಕುಮಾರಸ್ವಾಮಿಯವರು, ಜೆಡಿಎಸ್'ನಿಂದ ಪ್ರವರ್ದನಮಾನಕ್ಕೆ ಬಂದಿದ್ದ, ಜೆಡಿಎಸ್ ನಿಂದಲೇ ಉಪಮುಖ್ಯಮಂತ್ರಿಯಾಗಿದ್ದ ನಾಯಕರೊಬ್ಬರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿದ್ದು, ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದಿದ್ದಾರೆಂದು ಸಿದ್ದರಾಮಯ್ಯ ಅವರ ಹೆಸರನ್ನು ಹೇಳದೆಯೇ ಟೀಕಾ ಪ್ರಹಾರ ನಡೆಸಿದ್ದಾರೆ. 

ಸಭೆಯೊಂದರಲ್ಲಿ ಜೆಡಿಎಸ್ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ. ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್ ಅವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ ಎಂದು ಹರಿಹಾಯ್ದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com