ಅಮ್ಮಾಜಮ್ಮ
ರಾಜಕೀಯ
ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಕೊರೋನಾ: ಆಸ್ಪತ್ರೆಯಲ್ಲಿ ಚಿಕಿತ್ಸೆ
ನವೆಂಬರ್ 3 ರಂದು ನಡೆಯಲಿರುವ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇಂದು ಮಧ್ಯಾಹ್ನವಷ್ಟೇ ಇವರಿಗೆ ಟಿಕೆಟ್ ಘೋಷಣೆಯಾಗಿತ್ತು.ಅಮ್ಮಾಜಮ್ಮ ಅವರೇ ಪಕ್ಷದ ಅಭ್ಯರ್ಥಿ ಎಂದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರು ಘೋಷಣೆ ಮಾಡಿದ್ದರು. ಆದರೆ, ಇದೀಗ ಅಮ್ಮಾಜಮ್ಮ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಚಾರವನ್ನು ಅವರ ಪುತ್ರ ಸತ್ಯ ಪ್ರಕಾಶ್ ತಿಳಿಸಿದ್ದಾರೆ.
ತಮ್ಮ ತಾಯಿ ಕೊರೋನಾ ಗೆದ್ದು ಚುನಾವಣೆಯಲ್ಲೂ ಗೆಲ್ಲುತ್ತಾರೆ. ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಬರುತ್ತಾರೆ ಎಂಬ ಅಚಲ ವಿಶ್ವಾಸವನ್ನು ಸತ್ಯಪ್ರಕಾಶ್ ವ್ಯಕ್ತಪಡಿಸಿದ್ದಾರೆ.


