ಯಡಿಯೂರಪ್ಪ ಸರ್ಕಾರ ಶೀಘ್ರವೇ ಪತನ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ: ಟಿ.ಬಿ. ಜಯಚಂದ್ರ

ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿದ್ದು, ಶೀಘ್ರವೇ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಹೇಳಿದ್ದಾರೆ.
ಟಿಬಿ ಜಯಚಂದ್ರ
ಟಿಬಿ ಜಯಚಂದ್ರ
Updated on

ಶಿರಾ: ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿದ್ದು, ಶೀಘ್ರವೇ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಹೇಳಿದ್ದಾರೆ.

ಶಿರಾ ಉಪ ಚುನಾವಣೆಯಲ್ಲಿ ಪ್ರಚಾರದಲ್ಲಿ ಮಾತನಾಡಿದ  ಜಯಚಂದ್ರ ಶೀಘ್ರದಲ್ಲೇ ಯಡಿಯೂರಪ್ಪ ಸರ್ಕಾರ ಪತನಗೊಳ್ಳುವುದು ಎಂದು ಹೇಳಿದ್ದಾರೆ.  ತಮ್ಮ 50 ವರ್ಷದ ರಾಜಕೀಯ ಜೀವನದಲ್ಲಿ ಎರಡು ಬಾರಿ ಮಧ್ಯಂತರ ಚುನಾವಣೆ ನೋಡಿರುವುದಾಗಿ ತಿಳಿಸಿದ್ದಾರೆ.

ಯಡಿಯೂರಪ್ಪ ಸರ್ಕಾರ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ, ಸರ್ಕಾರಗಳು ಅಲುಗಾಡಿದಾಗ ಮಧ್ಯಂತರ ಚುನಾವಣೆ ಎದುರಾಗುತ್ತವೆ ಎಂದು ಹೇಳಿದ್ದಾರೆ. 1985 ಮತ್ತು 2008 ರಲ್ಲಿ ಮೈತ್ರಿ ಸರ್ಕಾರಗಳು ಪತನಗೊಂಡಾಗ ಮಧ್ಯಂತರ ಚುನಾವಣೆ ಎದುರಾಗಿತ್ತು ಎಂದು ಅವರು ಸಾರ್ವಜನಿಕ ಸಭೆಯಲ್ಲಿ ಸ್ಮರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com