ಶಿರಾ, ಆರ್ ಆರ್ ನಗರ ಉಪಚುನಾವಣೆ: ಕಾಂಗ್ರೆಸ್ ವೀಕ್ಷಕರ ನೇಮಕ

ರಾಜರಾಜೇಶ್ವರಿ ನಗರ ಮತ್ತು ಶಿರಾ  ಕ್ಷೇತ್ರಗಳ ಉಪ ಚುನಾವಣೆಗೆ ಕೆಪಿಸಿಸಿ ವೀಕ್ಷಕರ ನೇಮಕ ಮಾಡಲಾಗಿದೆ. ಶಿರಾ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣ ಸಹ ಅಧ್ಯಕ್ಷತೆಯಲ್ಲಿ 51 ಜನ ಸದಸ್ಯರ ವೀಕ್ಷಕರನ್ನು ನೇಮಿಸಲಾಗಿದೆ. 
ಕಾಂಗ್ರೆಸ್ ಲೋಗೋ
ಕಾಂಗ್ರೆಸ್ ಲೋಗೋ
Updated on

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ  ಕ್ಷೇತ್ರಗಳ ಉಪ ಚುನಾವಣೆಗೆ ಕೆಪಿಸಿಸಿ ವೀಕ್ಷಕರ ನೇಮಕ ಮಾಡಲಾಗಿದೆ. ಶಿರಾ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣ ಸಹ ಅಧ್ಯಕ್ಷತೆಯಲ್ಲಿ 51 ಜನ ಸದಸ್ಯರ ವೀಕ್ಷಕರನ್ನು ನೇಮಿಸಲಾಗಿದೆ. 

ಪ್ರತಿ ವಾರ್ಡ್ ಗೆ ಇಬ್ಬರು ಮಾಜಿ ಸಚಿವರು, ಐವರು ಮಾಜಿ ಸಚಿವರಿಗೆ ಹೊಣೆ ನೀಡಲಾಗಿದೆ. ಉಳಿದವರಿಗೆ ಬೂತ್ ಮಟ್ಟದ ಜವಾಬ್ದಾರಿ ವಹಿಸಲಾಗಿದೆ.

ರಾಜರಾಜೇಶ್ವರಿ ನಗರದಲ್ಲಿ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ ಅಧ್ಯಕ್ಷತೆ ಹಾಗೂ ಕೃಷ್ಣ ಬೈರೇಗೌಡ ಸಂಚಾಲಕತ್ವದಲ್ಲಿ 58 ಜನ ವೀಕ್ಷಕರನ್ನು ನೇಮಿಸಲಾಗಿದೆ. ಶಿರಾದಲ್ಲಿ ಬೂತ್ ಮಟ್ಟದಲ್ಲಿ ಮಾಜಿ ಸಚಿವರು, ಶಾಸಕರಿಗೆ ಜವಾಬ್ದಾರಿ ವಹಿಸಲಾಗಿದೆ. ವೀಕ್ಷಕ್ಷರ ತಂಡ ಪ್ರತಿ ಹಳ್ಳಿಗೂ ತೆರಳಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲು ಪ್ರಯತ್ನಿಸುವಂತೆ ಸೂಚಿಸಲಾಗಿದೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ, ಹಿಂದುಳಿದ ವರ್ಗ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಸಭೆ ನಡೆಸಿದ ಅವರು, ಉಪ ಚುನಾವಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರೋಪ ಮಾಡುವ ಬದಲು ಸಕಾರಾತ್ಮಕ ಪ್ರಚಾರ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದಿನ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಯಾ ಕ್ಷೇತ್ರಗಳಿಗೆ ಮತ್ತು ಜನರಿಗೆ ನೀಡಿರುವ ಕೊಡುಗೆಗಳ ಬಗ್ಗೆ ಹೆಚ್ಚು ಪ್ರಚಾರ ಮಾಡುವಂತೆ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವನ್ನು ಹೆಚ್ಚು ಬಳಕೆ ಮಾಡಿಕೊಂಡು, ಪ್ರತಿ ಬೂತ್ನಾಲ್ಲಿಯೂ ವಾಟ್ಸ್ ಆಪ್ ಗ್ರೂಪ್ಗ್ಳನ್ನು ಮಾಡಿ, ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ನೀಡಿರುವ ಕೊಡುಗೆಗಳ ಬಗ್ಗೆ ಸಂದೇಶ ರವಾನೆ ಮಾಡುವಂತೆ ಪದಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com