ಕೃಷ್ಣಮೂರ್ತಿ-ಕುಮಾರಸ್ವಾಮಿ
ಕೃಷ್ಣಮೂರ್ತಿ-ಕುಮಾರಸ್ವಾಮಿ

ನಾನು ಈ ಕ್ಷೇತ್ರದ ಮಗ, ಆರ್‌ಆರ್‌ ನಗರದಲ್ಲಿ ಗೆಲುವು ನನ್ನದೇ: ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ವಿಶ್ವಾಸ

ನಾನು ಈ ಕ್ಷೇತ್ರದ ಮಗ ನಿಮ್ಮೆಲ್ಲರ ಕಷ್ಟ ಸುಖಗಳನ್ನು ನೋಡಿಕೊಂಡೇ ಬೆಳೆ ದವನು. ಜೆಡಿಎಸ್‌ ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ಈ ಚುನಾವಣೆಯಲ್ಲಿ ನಾವೇ ಗೆಲ್ಲುವುದು ಎಂದು ರಾಜರಾಜೇಶ್ವರಿ ನಗರ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ವಿ. ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
Published on

ಬೆಂಗಳೂರು: ನಾನು ಈ ಕ್ಷೇತ್ರದ ಮಗ ನಿಮ್ಮೆಲ್ಲರ ಕಷ್ಟ ಸುಖಗಳನ್ನು ನೋಡಿಕೊಂಡೇ ಬೆಳೆ ದವನು. ಜೆಡಿಎಸ್‌ ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ಈ ಚುನಾವಣೆಯಲ್ಲಿ ನಾವೇ ಗೆಲ್ಲುವುದು ಎಂದು ರಾಜರಾಜೇಶ್ವರಿ ನಗರ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ವಿ. ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಆರ್‌ಆರ್‌ ನಗರ ವ್ಯಾಪ್ತಿಯ ಸಜ್ಜೆಪಾಳ್ಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ನಾನು ಎಂದೆಂದಿಗೂ ನಿಮ್ಮ ಜೊತೆ ಇರುತ್ತೇನೆ. ಬಿಜೆಪಿ-ಕಾಂಗ್ರೆಸ್‌ನವರು ಎಷ್ಟೇ ಜನರನ್ನು ಜೆಡಿಎಸ್‌ನಿಂದ ಸೇರಿಸಿಕೊಂಡರು ನಮ್ಮ ಮೇಲೆ ಯಾವ ಪರಿಣಾಮ ಬೀರಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮುಂದುವರಿಸೋಣ ಎಂದು ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿದರು.

ಬೆಳಗಿನಿಂದಲೇ ಬಿರುಸಿನ ಪ್ರಚಾರ ನಡೆಸಿದ ಕೃಷ್ಣಮೂರ್ತಿ, ಬಿಇಎಂಎಲ್‌ ಲೇಔಟ್‌ನ ಮಾರುತಿ ದೇವಸ್ಥಾನದ ಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದಿನವಿಡೀ ಪ್ರೆಸ್ ಲೇಔಟ್ ಪಾರ್ಕ್, ಬಿಇಎಂಎಲ್‌ ಲೇಔಟ್‌, ಲಗ್ಗೆರೆ, ಕೊಟ್ಟಿಗೆಪಾಳ್ಯ ಹಾಗೂ ಜ್ಞಾನಭಾರತಿ ವಾರ್ಡ್‌ಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ ಮತಯಾಚಿಸಿದರು. ಅಭ್ಯರ್ಥಿಗೆ ಜೆಡಿಎಸ್‌ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌ ಸೇರಿ ಅನೇಕ ಮುಖಂಡರು ಸಾಥ್‌ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com