ಸಚಿವ ಸ್ಥಾನದ ಆಸೆ ಭಗ್ನ: ತಮ್ಮನ್ನು ಪ್ರಬಲ ಲಿಂಗಾಯತ ಮುಖಂಡನೆಂದು ಬಿಂಬಿಸಲು ಯತ್ನಾಳ್ ಯತ್ನ?

ಅನುದಾನ ಸಿಗದ ಕಾರಣ ಯತ್ನಾಳ್ ಸಿಎಂ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣಿಸಿದರೂ ಒಳಗಿನ ಕಾರಣವೇ ಬೇರೆಯೇ ಇದೆ ಎಂದು ಪಕ್ಷದ ನಾಯಕರು ಅಭಿಪ್ರಾಯಪಟ್ಟಿದ್ದಾರೆ. 
ಯಡಿಯೂರಪ್ಪ ಮತ್ತು ಯತ್ನಾಳ್
ಯಡಿಯೂರಪ್ಪ ಮತ್ತು ಯತ್ನಾಳ್
Updated on

ಬೆಂಗಳೂರು: ಹಿರಿಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಕ್ಷೇತ್ರ ವಿಜಯಪುರದ ಅಭಿವೃದ್ಧಿಗಾಗಿ ಶಾಸಕರ ನಿಧಿ ಬಿಡುಗಡೆ ಮಾಡಿಲ್ಲ ಎಂದು ಆರೋಪ ಮಾಡುವುದರ ಜೊತೆಗೆ ಸಿಎಂ ಯಡಿಯೂರಪ್ಪ ಅವರು ಹೆಚ್ಚಿನ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನುದಾನ ಸಿಗದ ಕಾರಣ ಯತ್ನಾಳ್ ಸಿಎಂ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣಿಸಿದರೂ ಒಳಗಿನ ಕಾರಣವೇ ಬೇರೆಯೇ ಇದೆ ಎಂದು ಪಕ್ಷದ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ. 

ಹಿಂದುತ್ವ ಪ್ರತಿಪಾದನೆ ಬಗ್ಗೆ ಪ್ರಬಲ ನಿಲುವು ಹೊಂದಿರುವ ಯತ್ನಾಳ್ ಪ್ರಮುಖ ಲಿಂಗಾಯತ ಮುಖಂಡರಾಗಿದ್ದು ರಾಜ್ಯ ಸರ್ಕಾರದಲ್ಲಿ ತಮಗೆ ಪ್ರಮುಖ ಸ್ಥಾನ ದೊರೆಯದ ಕಾರಣಕ್ಕೆ ಅಸಮಾಧಾನಗೊಂಡಿದ್ದಾರೆ, ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯತ ನಾಯಕನೆಂದು ತಮ್ಮನ್ನು ಯತ್ನಾಳ್ ಬಿಂಬಿಸಿಕೊಳ್ಳಲು ಹೊರಟಿದ್ದಾರೆ.

ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿದ್ದ ಯತ್ನಾಳ್ ಸಿಎಂ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿರುವುದು ಇದೇ ಮೊದಲಲ್ಲ, ಈ ವರ್ಷದ ಆರಂಭದಲ್ಲೂ ಕೂಡ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ನಿಧಿ ಹಣ ಬಿಡುಗಡೆ ಮಾಡಿಲ್ಲ ಎಂದು ಸಿಎಂ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಜೊತೆಗೆ ಕೇಂದ್ರ ಸಚಿವರ ವಿರುದ್ಧವು ಹರಿಹಾಯ್ದಿದ್ದರು. 

ತಾವು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಯತ್ನಾಳ್ ನಿರಾಕರಿಸಿದ್ದಾರೆ, ಆದರೆ ಪಕ್ಷದ ಒಳಗಿನವರು ಹೇಳುವ ಪ್ರಕಾರ, ಯತ್ನಾಳ್ ಗೆ ಸಂಪುಟದಲ್ಲಿ ಸ್ಥಾನ ನೀಡದ ಕಾರಣ ಮತ್ತು ಕೆಲವು ಲಿಂಗಾಯತ ನಾಯಕರು ಸಿಎಂ ಜೊತೆ ಉತ್ತಮ ಬಾಂಧವ್ಯ ಹೊಂದಿರುವುದು ಯತ್ನಾಳ್ ಕೆಂಗಣ್ಣಿಗೆ ಕಾರಣವಾಗಿದೆ.

ಯತ್ನಾಳ್, ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿ ಉತ್ತರ ಕರ್ನಾಟಕದ ಪ್ರಮುಖ ಲಿಂಗಾಯತ ನಾಯಕರಾಗಿದ್ದಾರೆ,  ಚುನಾವಣೆಗಳನ್ನು ತಮ್ಮದೆ ಸಾಮರ್ಥ್ಯದಿಂದ ಗೆಲ್ಲುವ ಶಕ್ತಿ ಹೊಂದಿರುವ ಸರ್ಕಾರದ ಭಾಗವಾಗಿರಬೇಕು ಎಂದು ಬಯಸುತ್ತಾರೆ,

ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಂದವರಿಗೆ ಮಣೆ ಹಾಕುತ್ತಿರುವುದು ಜೊತೆಗೆ 2018ರ ಚುನಾವಣೆಯಲ್ಲಿ ಸೋತವರಿಗೆ ಸ್ಥಾನ ನೀಡಿರುವುದು ಇವರ ಅಸಮಾಧಾನಕ್ಕೆ ಕಾರಣವಾಗಿದೆ.  

ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿರುವುದನ್ನು ಸಹಿಸಲಾಗುತ್ತಿಲ್ಲ. 2018ರ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ ನಿಷ್ಠಾವಂತರನ್ನು ಹೊರಗಿಟ್ಟಿದ್ದಾರೆ ಎಂಬುದು ಇವರ ಆರೋಪವಾಗಿದ್ದು, ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಹಿರಿಯ ನಾಯಕರಾಗಿದ್ದರೂ ಸರ್ಕಾರದಲ್ಲಿ ಪ್ರಾಮುಖ್ಯತೆ ನೀಡದಿರುವುದು ಮತ್ತು ಸ್ವತಂತ್ರ್ಯವಾಗಿ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯವಿರುವವರನ್ನು ಕಡೆಗಣಿಸಿರುವು ಕೆಲವು ಹಿರಿಯರ ಕೆಂಗಣ್ಣಿಗೆ ಕಾರಣವಾಗಿದೆ. ಆದರೆ ಸರ್ಕಾರ ಅಸ್ಥಿಸ್ವಕ್ಕೆ ಬರಲು ಕಾರಣರಾದವರಿಗೆ ಸಚಿವ ಸ್ಥಾನ ನೀಡುವುದು ಸಿಎಂ ಕರ್ತವ್ಯವಾಗಿದೆ ಎಂದು ಕೆಲ ಬಿಜೆಪಿ ನಾಯಕರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com