
ಬೆಂಗಳೂರು: ಒಂದು ಸಮುದಾಯಕ್ಕೆ ಸೇರಿದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ರಹಸ್ಯವಾಗಿ ಡಿಲೀಟ್ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಆರೋಪಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೃಷ್ಣ ಬೈರೇಗೌಡ ಅವರೂ ಕೂಡ ಇದೇ ರೀತಿಯ ಆರೋಪ ಮಾಡಿದ್ದರು. ಸಂಸತ್ ಚುನಾವಣೆ ವೇಳೆ ಬೆಂಗಳೂರು ದಕ್ಷಿಣ ಭಾಗದಲ್ಲಿ ಕೆಲ ಸಮುದಾಯಗಳ ಸದಸ್ಯರ ಸುಮಾರು 30,000 ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದ್ದರು.
ಉಪ ಚುನಾವಣೆ ಹಿನ್ನೆಲೆಯಲ್ಲಿ ಆರ್.ಆರ್.ನಗರದ ಒಕ್ಕಲಿಗಾ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿರುವ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಪತಿಯಾಗಿದ್ದ ಐಎಎಸ್ ಅಧಿಕಾರಿ ದಿವಂಗತ ಡಿ ಕೆ ರವಿ ಅವರು ಧೈರ್ಯಶಾಲಿಯಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವಂತಹ ವ್ಯಕ್ತಿಯಾಗಿರಲಿಲ್ಲ.
ಚುನಾವಣಾ ಪ್ರಚಾರದ ವೇಳೆ ಡಿಕೆ ರವಿ ಪತ್ನಿ ಕಸುಮಾ ಅವರು ತಮ್ಮ ಪತಿಯ ಹೆಸರನ್ನು ಬಳಸುವುದಕ್ಕೆ ಬಿಜೆಪಿ ಸಂಸದ ಶೋಭಾ ಕರಂದ್ಲಾಜೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಐಎಎಸ್ ಅಧಿಕಾರಿಯಾಗಿದ್ದ ರವಿಯವರನ್ನು ಕುಸುಮಾ ಅವರು ವಿವಾಹವಾಗಿದ್ದು, ಅವರ ಪತಿಯ ಹೆಸರನ್ನು ಬಳಕೆ ಮಾಡಿಕೊಳ್ಳುವ ಎಲ್ಲಾ ಹಕ್ಕು ಕುಸುಮಾ ಅವರಿಗಿದೆ ಎಂದು ಹೇಳಿದ್ದಾರೆ.
ಕೆಲವರು ಬಂಡೆಯನ್ನು ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಎಂದಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ. ಮಿತಿ ಮೀರಿದರೆ ಈ ಜನ ವಿರೋಧಿ ಸರ್ಕಾರಕ್ಕೆ ಜನ ಬೀಸುವ ಕಲ್ಲಾಗುವೆ. ಹೀಗಾಗಿ ತಾವು ಕೇವಲ ಬಂಡೆಯಾಗಲು ಇಚ್ಛಿಸುವುದಿಲ್ಲ. ಜನರಿಗೆ ನನ್ನಿಂದ ಉಪಯೋಗವಾದರೆ ಸಾಕು ಎಂದು ತಿಳಿಸಿದ್ದಾರೆ.
Advertisement