ಶಿರಾದಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಗೆಲುವು ಸಾಧಿಸಲಿದೆ: ಕಟೀಲ್

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ. 
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Updated on: 

ಚಿಕ್ಕಮಗಳೂರು: ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮತದಾರರು ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ನಡೆಸಿದ ಶೈಲಿ ನೋಡಿ ಬೇಸತ್ತು ಹೋಗಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯು 15,000 ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಹೇಳಿದ್ದಾರೆ. 

ಇದೇ ವೇಳೆ ರಾಜರಾಜೇಶ್ವರಿ ನಗರ ಉಪಚುನಾವಣೆ ಕುರಿತಂತೆ ಮಾತನಾಡಿದ ಅವರು, ಅಲ್ಲಿಯೂ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲವು ಸಾಧಿಸಲಿದ್ದಾರೆ. ಬರೋಬ್ಬರಿ 50,000 ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ತಿಳಿಸಿದ್ದಾರೆ. 

ಇದೇ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಆಂತರಿಕ ಒಪ್ಪಂದ ಮಾಡಿಕೊಂಡಿದೆ ಎಂಬ ಊಹಾಪೋಹಗಳ ಕುರಿತು ಮಾತನಾಡಿದ ಅವರು, ಇದರ ಅಗತ್ಯಬಿದ್ದಿಲ್ಲ. ಕಾಂಗ್ರೆಸ್ ಈಗಾಗಲೇ ಮುಖ್ಯಮಂತ್ರಿಗಳ ಸ್ಥಾನಕ್ಕಾಗಿ ಮ್ಯೂಸಿಕಲ್ ಚೇರ್ ಆಟವಾಗುತ್ತಿದೆ. ವಿಧಾನಸಭಾ ಚುನಾವಣೆ ಬಹಳ ದೂರದಲ್ಲಿರುವಾಗಲೇ ಈಗಲೇ ಅಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳ ಕುರಿತಂತೆ ಮಾತುಕತೆ ನಡೆಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com