'ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿಗಳಿದ್ದರೇ ಆದಷ್ಟು ಬೇಗ ಬಿಡುಗಡೆ ಮಾಡಲಿ: ನನ್ನ ಗುರಿ ಸ್ಪಷ್ಟವಾಗಿದೆ'

ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿಗಳಿದ್ದರೇ. ಆದಷ್ಟು ಬೇಗ ಬಿಡುಗಡೆ ಮಾಡಲಿ, ಯಾವುದೇ ಕಾರಣಕ್ಕೂ ನಾನು ಈ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಗುರಿ ಸ್ಪಷ್ಟವಾಗಿದೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ವಿಜಯೇಂದ್ರ
ವಿಜಯೇಂದ್ರ
Updated on

ಮೈಸೂರು: ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿಗಳಿದ್ದರೇ. ಆದಷ್ಟು ಬೇಗ ಬಿಡುಗಡೆ ಮಾಡಲಿ, ಯಾವುದೇ ಕಾರಣಕ್ಕೂ ನಾನು ಈ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಗುರಿ ಸ್ಪಷ್ಟವಾಗಿದೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಈ ಆರೋಪಗಳು ಹೊಸದೇನಲ್ಲ‌. ಹಿಂದೆಯು ಮಾಡಿದ್ರು, ಮುಂದೆಯು ಮಾಡುತ್ತಾರೆ. ನಮ್ಮ ಕುಟುಂಬದ ಮೇಲೆ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿಗಳಿದ್ದಾರೆ ಆದಷ್ಟು ಬೇಗ ಬಿಡುಗಡೆ ಮಾಡಲಿ. ಬೇಗ ಬಿಡುಗಡೆ ಮಾಡಲಿ ಅಂತ  ನಾನು ಕೂಡ ಕೇಳಿಕೊಳ್ಳುತ್ತೇನೆ‌. ಯಾವುದೇ ಕಾರಣಕ್ಕೂ ನಾನು ಈ ವಿಚಾರಕ್ಕೆ,ನನ್ನ ಗುರಿ ಸ್ಪಷ್ಟವಾಗಿದೆ ಎಂದರು.

ಸಿಎಂ ಯಡಿಯೂರಪ್ಪ ಅವರು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ. ಡ್ರಗ್ ಮಾಫಿಯಾದಲ್ಲಿ ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಿದ್ದಾರೆ. ನಾನು ನನ್ನು ಗುರಿಯ ಕಡೆ ಗಮನ ಹರಿಸಿದ್ದೇನೆ ಎಂದರು.

ಈ ಮಧ್ಯೆ ನಟಿ ರಾಗಿಣಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡ ಹೇಳಿಕೆ ಕುರಿತು  ಪ್ರತಿಕ್ರಿಯಿಸಿರುವ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ, ಚಿತ್ರ ನಟರು ಸಾಮಾನ್ಯವಾಗಿ ಎಲ್ಲಾ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸಾಮಾನ್ಯ. ಕೆಲ ನಟ ನಟಿಯರು ಒಂದೆ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದೇ ಪಕ್ಷದವರು ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಇಲ್ಲಿ ಯಾರೇ ತಪ್ಪು ಮಾಡಿದರು ಅವರ ರಕ್ಷಣೆಯ ಪ್ರಶ್ನೆಯೇ ಇಲ್ಲ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com