

ಬೆಂಗಳೂರು: ಬ್ಲೂ ಫಿಲಂ ನೋಡುವ ವ್ಯಸನ ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್ ಆದರೂ, ಬ್ಲೂ ಫಿಲಂ ಆದರೂ.. ಎಂದು ಮಾಜಿ ಸಚಿವ ಸಾ.ರಾ ಮಹೇಶ್ ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಾರಾ ಮಹೇಶ್, ಡ್ರಗ್ಸ್ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‌ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಆದರೆ ಬ್ಲೂ ಫಿಲಂ ನೋಡುವ ವ್ಯಸನ ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು ಎಂದು ಲೇವಡಿ ಮಾಡಿದ್ದಾರೆ.
ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬರದವರು ನೆಲ ಡೊಂಕು ಎನ್ನುವಂತಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಗುರುವಾರ ಟೀಕಿಸಿದ್ದರು.
Advertisement