ಎಚ್.ಕೆ ಪಾಟೀಲ್
ಎಚ್.ಕೆ ಪಾಟೀಲ್

ಮಹಾರಾಷ್ಟ್ರದಲ್ಲಿ ಸಾಕಷ್ಟು ಸವಾಲುಗಳಿವೆ: ಕಾಂಗ್ರೆಸ್ ಗತ ವೈಭವ ಮರು ಸ್ಥಾಪಿಸುವೆ; ಎಚ್.ಕೆ ಪಾಟೀಲ್

ಪಕ್ಷದ ಹೈಕಮಾಂಡ್‌ ನೀಡಿರುವ ಮಹಾರಾಷ್ಟ್ರ ಉಸ್ತುವಾರಿ ಜವಾಬ್ದಾರಿಯನ್ನು ಎಲ್ಲ ನಾಯಕರ ಸಹಕಾರದೊಂದಿಗೆ ಸಮರ್ಥವಾಗಿ ನಿಭಾಯಿಸುವೆ ಎಂದು ಕಾಂಗ್ರೆಸ್ ಮುಖಂಡ ಎಚ್‌.ಕೆ. ಪಾಟೀಲ್‌ ಹೇಳಿದ್ದಾರೆ.
Published on

ಬೆಂಗಳೂರು: ಪಕ್ಷದ ಹೈಕಮಾಂಡ್‌ ನೀಡಿರುವ ಮಹಾರಾಷ್ಟ್ರ ಉಸ್ತುವಾರಿ ಜವಾಬ್ದಾರಿಯನ್ನು ಎಲ್ಲ ನಾಯಕರ ಸಹಕಾರದೊಂದಿಗೆ ಸಮರ್ಥವಾಗಿ ನಿಭಾಯಿಸುವೆ ಎಂದು ಕಾಂಗ್ರೆಸ್ ಮುಖಂಡ ಎಚ್‌.ಕೆ. ಪಾಟೀಲ್‌ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾರಾಷ್ಟ್ರ ದೊಡ್ಡ ರಾಜ್ಯ ಹಾಗೂ ರಾಜಕೀಯವಾಗಿ ದೇಶದಲ್ಲಿಯೇ ಮಹತ್ವ ಹೊಂದಿದೆ. ಅಲ್ಲಿ ಸಾಕಷ್ಟು ಸವಾಲುಗಳಿವೆ. ತನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ,  ಸೋನಿಯಾ ಗಾಂಧಿ ಮತ್ತಿ ಇತರ ಹಿರಿಯ ನಾಯಕರುಗಳ ಮಾರ್ಗದರ್ಶನದಂತೆ ಮಹಾ ರಾಷ್ಟ್ರದಲ್ಲಿ ಕಾಂಗ್ರೆಸ್‌ನ ಗತವೈಭವ ಸ್ಥಾಪಿಸಲು ಪ್ರಯತ್ನಿಸುವುದಾಗಿ ಹೇಳಿದರು. 

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಎಚ್ ಕೆ ಪಾಟೀಲ್ ಮುಂದೆ ಮಹತ್ವದ ಜವಾಬ್ದಾರಿಯಿದೆ, ಮಹಾರಾಷ್ಟ್ರದಲ್ಲಿ ಪ್ರಬಲವಾಗಿರುವ ಸಹಕಾರಿ ಕ್ಷೇತ್ರದಲ್ಲಿ ಅವರ ಅನುಭವವು ಅವರ ಪ್ರಯತ್ನಗಳಿಗೆ ಸಹಾಯ ಮಾಡುವ ಸಾಧ್ಯತೆಯಿದೆ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅಲ್ಲಿ ಉಸ್ತುವಾರಿಯಾಗಿ ದ್ದರು. ಹೀಗಾಗಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುವುದಾಗಿ ಹೇಳಿದರು. 

ಸೋನಿಯಾ, ರಾಹುಲ್ ಗಾಂಧಿ ಮತ್ತಿತರ ಹಿರಿಯ ನಾಯಕರನ್ನು ಭೇಟಿ ಮಾಡಿದ ನಂತರ ಮಹಾರಾಷ್ಟ್ರಕ್ಕೆ ತೆರಳುವುದಾಗಿ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮುಂದುವರಿಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com