ಬಿಜೆಪಿ ಸರ್ಕಾರ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ - ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ಹೋಗಿ ನೆರೆಪರಿಹಾರ, ಜಿಎಸ್‌ಟಿ ಪರಿಹಾರ ಸೇರಿ ಹೆಚ್ಚಿನ ಅನುದಾನ ಕೇಳಿ ತರುತ್ತಾರೆಂಬ ನಿರೀಕ್ಷೆಯಿತ್ತು, ಆದರೆ ಅನುದಾನ ನೀಡುವ ಬಗ್ಗೆ ಕೇಂದ್ರದ ಯಾವೊಬ್ಬ ಮಂತ್ರಿಯೂ ಈವರೆಗೆ ಮಾತನಾಡಿಲ್ಲ. ಹೀಗಾಗಿ ಬಿಜೆಪಿ ಸರ್ಕಾರ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡುವುದು ನಿಶ್ಚಿತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮತ ನೀಡಿ ಗೆಲ್ಲಿಸಿದ ಮತದಾರರೇ ನೊಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ ಎಂದರೆ ರಾಷ್ಟ್ರದಲ್ಲಿ ಬಿಜೆಪಿ ಆಡಳಿತದ ಕೊನೆ ದಿನಗಳು ಸಮೀಪಿಸುತ್ತಿದೆ ಎಂದೇ ಅರ್ಥ. ಇಂಥಾ ಸಂದರ್ಭದಲ್ಲಿ ಗೌರವಯುತವಾಗಿ ಅವರೇ ರಾಜೀನಾಮೆ ನೀಡುವುದು ಉತ್ತಮ ಎಂದು ಅವರು ಸರಣಿ ಟ್ವೀಟ್ ನಲ್ಲಿ ಒತ್ತಾಯಿಸಿದ್ದಾರೆ.
ನಾವಾಗಿಯೇ ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕೈಹಿಡಿದು ಎಳೆದುಕೊಂಡು ಬರುವುದಿಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು, ಪಕ್ಷದ ನಾಯಕತ್ವವನ್ನು ಒಪ್ಪಿ ಬರುವವರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ಸೈದ್ಧಾಂತಿಕ ಬದ್ಧತೆಯಿಲ್ಲದ ಅಧಿಕಾರದಾಹಿಗಳ ಅಗತ್ಯ ನಮ್ಮ ಪಕ್ಷಕ್ಕಿಲ್ಲ. ಅಂಥವರಿಂದ ಕಾಂಗ್ರೆಸ್ ದೂರವಿರಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ