ಶೀಘ್ರದಲ್ಲೇ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ! ಸಂಸದ ಬಚ್ಚೇಗೌಡ ಪ್ರತಿಕ್ರಿಯೆ

ತಮ್ಮ ಪುತ್ರ ಕಾಂಗ್ರೆಸ್ ಸೇರ್ಪಡೆ ಆಗವುದು ಅವನಿಗೆ ಬಿಟ್ಟದ್ದು. ನಾನು ಬಿಜೆಪಿಯ ಸಂಸದನಾಗಿದ್ದೇನೆ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 
ಶರತ್ ಬಚ್ಚೇಗೌಡ
ಶರತ್ ಬಚ್ಚೇಗೌಡ
Updated on

ಬೆಂಗಳೂರು: ತಮ್ಮ ಪುತ್ರ ಕಾಂಗ್ರೆಸ್ ಸೇರ್ಪಡೆ ಆಗವುದು ಅವನಿಗೆ ಬಿಟ್ಟದ್ದು. ನಾನು ಬಿಜೆಪಿಯ ಸಂಸದನಾಗಿದ್ದೇನೆ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 

ವಿಧಾನಸೌಧದಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅವರು, ಅವನು ಭವಿಷ್ಯದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾನೆ ಎನ್ನುವ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಬಿಜೆಪಿಯಲ್ಲಿದ್ದು ಇದರ ಬಗ್ಗೆ ಮಾತನಾಡುವುದಿಲ್ಲ. ನಾನು ಶರತ್‌ಗೆ ಚುನಾವಣೆಯಲ್ಲಿ ಬೆಂಬಲ ನೀಡಿಲ್ಲ. ಭವಿಷ್ಯದ ರಾಜಕೀಯದ ಬಗ್ಗೆಯೂ ನಾನು ಮುನ್ಸೂಚನೆ ನೀಡುವುದಿಲ್ಲ ಎಂದು ತಿಳಿಸಿದರು. ಅಲ್ಲದೆ ಎಂಟಿಬಿ ನಾಗರಾಜ್‌ಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಪ್ರತಿಕ್ರಿಯಿಸಿದ ಸಂಸದರು, ಎಂಟಿಬಿ ನಾಗರಾಜ್‌ಗೆ ಸಚಿವ ಸ್ಥಾನ ನೀಡುವುದು ಸಿಎಂಗೆ ಬಿಟ್ಟದ್ದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com