ಮುನಿರತ್ನಗೆ ಟಿಕೆಟ್ ಖಚಿತ, ಯಾವುದೇ ಪ್ರತಿರೋಧವಿಲ್ಲದೆ ಗೆಲುವು: ಸಚಿವ ಸುಧಾಕರ್‌

ಪಕ್ಷದ ಭರವಸೆಯಂತೆ ಆರ್ ಆರ್. ನಗರ ಕ್ಷೇತ್ರದ ಉಪ ಚುನಾವಣೆಗೆ ಮುನಿರತ್ನ ಅವರಿಗೇ ಟಿಕೆಟ್‌ ಸಿಗುವ ವಿಶ್ವಾಸವಿದ್ದು, ಯಾವುದೇ ಪ್ರತಿರೋಧವಿಲ್ಲದೇ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಅವರು ಮಂಗಳವಾರ ಹೇಳಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
Updated on: 

ಬೆಂಗಳೂರು: ಪಕ್ಷದ ಭರವಸೆಯಂತೆ ಆರ್ ಆರ್. ನಗರ ಕ್ಷೇತ್ರದ ಉಪ ಚುನಾವಣೆಗೆ ಮುನಿರತ್ನ ಅವರಿಗೇ ಟಿಕೆಟ್‌ ಸಿಗುವ ವಿಶ್ವಾಸವಿದ್ದು, ಯಾವುದೇ ಪ್ರತಿರೋಧವಿಲ್ಲದೇ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಅವರು ಮಂಗಳವಾರ ಹೇಳಿದ್ದಾರೆ.

ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರ ಅವರು, ಮುನಿರತ್ನ ಅವರು ಶಾಸಕ‌ ಸ್ಥಾನ ತ್ಯಜಿಸಿ ಸರಕಾರ ರಚನೆಗಾಗಿ ಕೊಡುಗೆ ನೀಡಿದ್ದಾರೆ. ಆ ವೇಳೆ ನೀಡಿದ ಭರವಸೆಯಂತೆ ಹಿರಿಯ ನಾಯಕರು ಖಂಡಿತ ನ್ಯಾಯಯುತವಾದ ತೀರ್ಮಾನ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಉಪ ಚುನಾವಣೆಯಲ್ಲಿ ಗೆದ್ದ ನಮ್ಮೆಲ್ಲರಿಗೂ ಭರವಸೆಯಂತೆ ನಡೆದುಕೊಂಡಿದ್ದಾರೆ. ಹೀಗಾಗಿ ಮುನಿರತ್ನ ಅವರಿಗೂ ಸಹ ಈ ಬಾರಿ ಯಾವುದೇ ಅನ್ಯಾಯವಾಗುವುದಿಲ್ಲ. ಯಾರಿಗೆ ಆದ್ಯತೆ ನೀಡಬೇಕು ಎಂಬುದು ಪಕ್ಷದ‌ ನಾಯಕರಿಗೆ ತಿಳಿದಿದೆ ಎಂದು ಹೇಳಿದರು.

ಯಡಿಯೂರಪ್ಪ ಅವರೇ ನಮ್ಮ‌ನಾಯಕರು
ಪಕ್ಷದ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ‌ ನಾಯಕರು ಸದೃಢರಾಗಿದ್ದಾರೆ, ನಾಯಕತ್ವ ಬದಲಾವಣೆ ಹೇಳಿಕೆಯ ಊಹಾಪೋಹಗಳಿಗೆ ಕಿವಿಗೊಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com