ಇವಿಎಂ
ಇವಿಎಂ

ಶಿಕ್ಷಕರ ಕ್ಷೇತ್ರದ ಚುನಾವಣೆ: ನವೆಂಬರ್ 5 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2020ಕ್ಕಾಗಿ ಚುನಾವಣಾ ಕಾರ್ಯಸೂಚಿಯನ್ನು ಕೇಂದ್ರ ಚುನಾವಣಾ ಆಯೋಗವು ನೀಡಿದ್ದು, ಚುನಾವಣಾ ಕ್ಷೇತ್ರದ ವ್ಯಾಪ್ತಿಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೆಪ್ಟೆಂಬರ್ 29 ರಿಂದ ನವೆಂಬರ್ 05 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ..
Published on

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2020ಕ್ಕಾಗಿ ಚುನಾವಣಾ ಕಾರ್ಯಸೂಚಿಯನ್ನು ಕೇಂದ್ರ ಚುನಾವಣಾ ಆಯೋಗವು ನೀಡಿದ್ದು, ಚುನಾವಣಾ ಕ್ಷೇತ್ರದ ವ್ಯಾಪ್ತಿಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೆಪ್ಟೆಂಬರ್ 29 ರಿಂದ ನವೆಂಬರ್ 05 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ತಿಳಿಸಿದ್ದಾರೆ.

ಚುನಾವಣಾ ಕಾರ್ಯಸೂಚಿಯಂತೆ ಅಕ್ಟೋಬರ್ 01, 2020 ರಂದು ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ 8, 2020 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 9, 2020ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ.

ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 12, 2020 ರಂದು ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್ 28, 2020 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನದ ನಡೆಯಲಿದೆ. ನವೆಂಬರ್ 02, 2020ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ಚುನಾವಣಾ ಕಾರ್ಯ ನವೆಂಬರ್ 5 ರಂದು ಮುಕ್ತಾಯಗೊಳ್ಳಲಿದೆ.

ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು ಭಾರತೀಯ ಸಂವಿಧಾನದ ಅನುಚ್ಛೇದ 173(ಬಿ)ರನ್ವಯ 30 ವರ್ಷಗಳಿಗೆ ಕಡಿಮೆ ಇರಕೂಡದು ಮತ್ತು ಅವರು ಕರ್ನಾಟಕದ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು. 
ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com